ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಂಡಿ ವಿಶ್ವವಿದ್ಯಾಲಯ: ಜೀವವಿಜ್ಞಾನ ಅಧ್ಯಯನಕ್ಕೆ ಸಹಭಾಗಿತ್ವ

ದಂಡಿ ವಿಶ್ವವಿದ್ಯಾಲಯಕ್ಕೆ ಅಶ್ವತ್ಥನಾರಾಯಣ ಭೇಟಿ
Last Updated 21 ಮೇ 2022, 19:34 IST
ಅಕ್ಷರ ಗಾತ್ರ

ಬೆಂಗಳೂರು: ಜೀವವಿಜ್ಞಾನ ಕ್ಷೇತ್ರದ ಅಧ್ಯಯನ ಮತ್ತು ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದಿರುವಸ್ಕಾಟ್ಲೆಂಡ್‌ನ ದಂಡಿ ವಿಶ್ವ ವಿದ್ಯಾಲಯದ ಜೀವವಿಜ್ಞಾನ ವಿಭಾಗ ಮತ್ತು ಅತ್ಯಾಧುನಿಕ ಪ್ರಯೋಗಾಲಯಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶನಿವಾರ ಭೇಟಿ ನೀಡಿದರು.

ಸಚಿವರೊಂದಿಗೆ ಮಾತನಾಡಿದ ವಿಶ್ವವಿದ್ಯಾಲಯದ ಉನ್ನತಾಧಿಕಾರಿ ಗಳ ನಿಯೋಗವು, ‘ನಮ್ಮ ತಂಡವು ಬರುವ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡಲಿದೆ. ಕರ್ನಾಟಕ ಸರ್ಕಾರವು ಆಸಕ್ತಿ ವಹಿಸಿದರೆ ಜೀವವಿಜ್ಞಾನ ಅಧ್ಯಯನಕ್ಕೆ ಸಹಭಾಗಿತ್ವ ಒಪ್ಪಂದ ಮಾಡಿಕೊಳ್ಳಲು ಸಿದ್ಧರಿದ್ದೇವೆ. ಇಂತಹ ಕೇಂದ್ರಗಳನ್ನು ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ತೆರೆಯಬಹುದು’ ಎಂದು ಪ್ರಸ್ತಾಪ ಮುಂದಿಟ್ಟಿತು.

‘ದಂಡಿ ವಿಶ್ವವಿದ್ಯಾಲಯದಲ್ಲಿ ದುಬಾರಿ ಮತ್ತು ಅತ್ಯಾಧುನಿಕ ಜೀವವಿಜ್ಞಾನ ಸಾಧನಗಳಿವೆ. ಇಲ್ಲಿ ಇಮೇಜ್ ಅನಾಲಿಸಿಸ್, ಡೇಟಾ ಕಮ್ಯುನಿಕೇಷನ್, ಸೈನ್ಸ್ ಕಮ್ಯುನಿಕೇಷನ್, ಡೇಟಾ ಸೈನ್ಸ್, ಮಷೀನ್ ಲರ್ನಿಂಗ್ ಕೋರ್ಸ್‌ಗಳಿವೆ. ಇದರಿಂದ ಕರ್ನಾಟಕದ ವಿದ್ಯಾರ್ಥಿಗಳ ಸಾಮರ್ಥ್ಯ ವೃದ್ಧಿಗೆ ಹೇರಳ ಅವಕಾಶಗಳು ಸಿಗಲಿವೆ. ಜತೆಗೆ, ನಾವು ಪದವಿ, ಸ್ನಾತಕೋತ್ತರ ಮತ್ತು ಪಿಎಚ್.ಡಿ. ಸಂಶೋಧನಾ ಕ್ರಮಗಳ ವಿನ್ಯಾಸವನ್ನೂ ಅಭಿವೃದ್ಧಿಪಡಿಸಿ ಕೊಡಲಿದ್ದೇವೆ’ ಎಂದು ನಿಯೋಗವು ತಿಳಿಸಿದೆ.

ಇದಕ್ಕೆ ಸ್ಪಂದಿಸಿದ ಸಚಿವರು, ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಗಳನ್ನು ಪರಿಶೀಲಿಸುವುದಾಗಿ ಹೇಳಿದರು.
ರಾಜ್ಯ ಸರ್ಕಾರದ ನಿಯೋಗದಲ್ಲಿ ಸಚಿವರ ಜತೆಗೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ ಕುಲಪತಿ ಡಾ.ಭಾನುಮೂರ್ತಿ, ಉನ್ನತ ಶಿಕ್ಷಣ ಪರಿಷತ್ತಿನ ಗೋಪಾಲಕೃಷ್ಣ ಜೋಶಿ, ಆಡಳಿತಾಧಿಕಾರಿ ತಾಂಡವ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT