ಶುಕ್ರವಾರ, ಅಕ್ಟೋಬರ್ 23, 2020
27 °C

ವಿಚ್ಛೇದನ ಕೋರಿರುವ ಕೆ. ಕಲ್ಯಾಣ್‌ ಪತ್ನಿ ಅಶ್ವಿನಿ: ವಕೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಚಿತ್ರ ಸಾಹಿತಿ ಕೆ. ಕಲ್ಯಾಣ್‌ ದಾಂಪತ್ಯದಲ್ಲಿ ಬಿರುಕು ಉಂಟಾಗಿದೆ. ವಿಚ್ಛೇದನ ಕೋರಿ ಅವರ ಪತ್ನಿ ಅಶ್ವಿನಿ (ಐಶ್ವರ್ಯಾ) ಜೂನ್ 26ರಂದು ಇಲ್ಲಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ’ ಎಂದು ಅಶ್ವಿನಿ ಪರ ವಕೀಲ ಸತೀಶ್ ದಳವಾಯಿ ತಿಳಿಸಿದರು.

ಇದನ್ನೂ ಓದಿ: ಪತ್ನಿಯನ್ನು ಅಪಹರಿಸಿ ಮೋಸ: ಚಲನಚಿತ್ರ ಸಾಹಿತಿ ಕೆ. ಕಲ್ಯಾಣ್‌ರಿಂದ ದೂರು

ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ‘ಕಲ್ಯಾಣ್ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಹೀಗಾಗಿ ವಿಚ್ಛೇದನ ಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಕಲ್ಯಾಣ್ ವಿರುದ್ಧ ಪತ್ನಿ ಮಾಳಮಾರುತಿ ಠಾಣೆಗೆ ಜೂನ್ 26ರಂದು ದೂರು ಕೂಡ ನೀಡಿದ್ದರು. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿಲ್ಲ. ಆದರೆ, ಕಲ್ಯಾಣ್‌ ಕೊಟ್ಟಿರುವ ಸುಳ್ಳು ದೂರನ್ನು ಸ್ವೀಕರಿಸಿ ತನಿಖೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.

‘ಹಣ, ಆಸ್ತಿ ಸಲುವಾಗಿ ಕಿರುಕುಳ ನೀಡುತ್ತಿದ್ದರು. ಇದನ್ನು ತಾಳಲಾರದೆ 14 ವರ್ಷಗಳ ದಾಂಪತ್ಯ ಜೀವನ ಕೊನೆಗೊಳಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ಅದನ್ನು ವಾಪಸ್ ಪಡೆಯಲೆಂದು ಒತ್ತಡ ಹೇರಲು ಕಲ್ಯಾಣ್ ದೂರು ನೀಡಿದ್ದಾರೆ. ಈಗ ಪೊಲೀಸರು ವಶಕ್ಕೆ ಪಡೆದಿರುವ ಶಿವಾನಂದ ಅಶ್ವಿನಿ ಅವರ ಸೋದರ ಸಂಬಂಧಿ. ಆಶ್ವಿನಿ ತಂದೆ–ತಾಯಿಯನ್ನು ಅವರೇ ನೋಡಿಕೊಳ್ಳುತ್ತಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು