ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳ ಅಭಿವೃದ್ಧಿ ಬಗ್ಗೆ ಶಾಸಕರನ್ನು ಪ್ರಶ್ನಿಸಿ: ಪ್ರೊ.ಎಂ.ಆರ್‌. ದೊರೆಸ್ವಾಮಿ

Last Updated 11 ಮಾರ್ಚ್ 2023, 17:57 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಶಾಲೆಗಳನ್ನು ದತ್ತುಪಡೆದು, ಅಭಿವೃದ್ಧಿಪಡಿಸಿರುವ ಕುರಿತು ರಾಜ್ಯದ ಮತದಾರರು ಎಲ್ಲ ಶಾಸಕರನ್ನು ಪ್ರಶ್ನಿಸಬೇಕು ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್‌. ದೊರೆಸ್ವಾಮಿ ಮನವಿ ಮಾಡಿದ್ದಾರೆ.

‘ಪ್ರತೀ ಶಾಸಕರು ಮೂರು ಶಾಲೆಗಳನ್ನು ದತ್ತು ಪಡೆದು, ಅಭಿವೃದ್ಧಿಪಡಿಸಲು 2020–21ರ ಬಜೆಟ್‌ನಲ್ಲಿ ಅನುದಾನ ಒದಗಿಸಲಾಗಿತ್ತು. ಕೆಲವು ಶಾಸಕರು ಮೂರಕ್ಕಿಂತ ಹೆಚ್ಚು ಶಾಲೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಆದರೆ, ಹೆಚ್ಚಿನ ಶಾಸಕರು ಶಾಲೆಗಳನ್ನು ದತ್ತು ಪಡೆದಿಲ್ಲ. ಈ ಕುರಿತ ನನ್ನ ಮನವಿಗಳಿಗೂ ಸ್ಪಂದಿಸಿಲ್ಲ. ಈಗಲೂ ಕಾಲ ಮಿಂಚಿಲ್ಲ. ಶಾಸಕರು ಸಂಪರ್ಕಕ್ಕೆ ಬಂದಾಗ ಮತದಾರರು ಪ್ರಶ್ನಿಸಬೇಕು’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಮನವಿಯಲ್ಲಿ ಯಾವುದೇ ಪೂರ್ವಾಗ್ರಹವಿಲ್ಲ. ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಉದ್ದೇಶ ಮಾತ್ರ ಇದೆ. ಜಾಗೃತ ಮತದಾರರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT