ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಕಲಾಪ ಅನಿರ್ದಿಷ್ಟ ಮುಂದೂಡಿಕೆ

Last Updated 5 ಫೆಬ್ರುವರಿ 2021, 20:13 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭಾ ಕಲಾಪವನ್ನು ಶುಕ್ರವಾರ ಅನಿರ್ದಿಷ್ಟ ಅವಧಿಗೆ ಮುಂದೂಡಲಾಯಿತು.

ಈ ಬಾರಿ ಮೂರು ಸುಗ್ರೀವಾಜ್ಞೆಗಳು ಸೇರಿ 14 ಮಸೂದೆಗಳು ಅಂಗೀಕಾರಗೊಂಡವು. ಒಟ್ಟು 33 ಗಂಟೆ 50 ನಿಮಿಷ ಕಲಾಪ ನಡೆಯಿತು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ 20 ಶಾಸಕರು ಮಾತನಾಡಿದರು.

ಈ ಬಾರಿ ಒಟ್ಟು 1,320 ಪ್ರಶ್ನೆಗಳನ್ನು ಶಾಸಕರು ಕೇಳಿದ್ದರು. 88 ಕ್ಕೆ ಉತ್ತರ ಬಂದಿತ್ತು. ಅದರಲ್ಲಿ 897 ಪ್ರಶ್ನೆ
ಗಳಿಗೆ ಲಿಖಿತ ರೂಪದಲ್ಲಿ ಉತ್ತರ ನೀಡಲಾಯಿತು. 168 ಗಮನ ಸೆಳೆಯುವ ಸೂಚನೆಗಳ ಪೈಕಿ 69 ಕ್ಕೆ ಸರ್ಕಾರ ಉತ್ತರ ನೀಡಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.ಬಜೆಟ್‌ ಅಧಿವೇಶನದಲ್ಲಿ ಮೊದಲ ಎರಡು ದಿನಗಳು ‘ಒಂದು ದೇಶ ಒಂದು ಚುನಾವಣೆ’ ವಿಷಯದ ಕುರಿತು ಚರ್ಚೆ ನಡೆಯಲಿದ್ದು, ಎಲ್ಲ ಸದಸ್ಯರೂ ಅದಕ್ಕೆ ತಯಾರಿ ನಡೆಸಿಕೊಂಡು ಬರುವಂತೆ ಅವರು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT