ಬುಧವಾರ, ಜುಲೈ 6, 2022
22 °C

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ: ಯುಪಿ+ಯೋಗಿ = ಉಪಯೋಗಿ ಎಂದ ಸುಧಾಕರ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯೋಗಿ ಆದಿತ್ಯನಾಥ ಅವರು ಉತ್ತರ ಪ್ರದೇಶವನ್ನು ಉತ್ತಮ ಪ್ರದೇಶವಾಗಿ ಪರಿವರ್ತಿಸುವ ಮೂಲಕ ‘ಯುಪಿ+ಯೋಗಿ’ ನಿಶ್ಚಯವಾಗಿ 'ಉಪಯೋಗಿ' ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ಡಾ.ಕೆ.ಸುಧಾಕರ್ ಬಣ್ಣಿಸಿದ್ದಾರೆ. 

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಕುರಿತು ಟ್ವೀಟ್ ಮಾಡಿರುವ ಅವರು, ‘ಉತ್ತರ ಪ್ರದೇಶವನ್ನು ಉತ್ತಮ ಪ್ರದೇಶವಾಗಿ ಪರಿವರ್ತಿಸುವ ಮೂಲಕ ‘ಯುಪಿ+ಯೋಗಿ’ ನಿಶ್ಚಯವಾಗಿ ‘ಉಪಯೋಗಿ’ ಎಂಬುದನ್ನು ಸಾಬೀತು ಪಡಿಸಿದೆ. ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ಐತಿಹಾಸಿಕ ಮತ್ತು ದೊಡ್ಡ ಗೆಲುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಅಚಲ ನಂಬಿಕೆ ಮತ್ತು ಮಹಾಂತ ಯೋಗಿ ಆದಿತ್ಯನಾಥ್‌ ಜೀ ಅವರ ವಿಕಾಸ ಮಂತ್ರದ ಫಲವಿದು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. 

ಓದಿ...

ಮೋದಿ ನೇತೃತ್ವದಲ್ಲಿ ಡಬಲ್ ಎಂಜಿನ್‌ ಸರ್ಕಾರಗಳು ಗೆಲ್ಲುತ್ತಿವೆ: ಸಿ.ಟಿ.ರವಿ 

ಕೆಲವೊಬ್ಬರು ಸುಧಾರಿಸುವುದೇ ಇಲ್ಲ: ಬಿ.ಎಲ್.ಸಂತೋಷ್ ವ್ಯಂಗ್ಯವಾಡಿದ್ದು ಯಾರ ಬಗ್ಗೆ?

 ಯುಪಿಯಲ್ಲಿ ಬಿಜೆಪಿಗೆ ಶೇ 38.9, ಪಂಜಾಬ್‌ನಲ್ಲಿ ಎಎಪಿಗೆ ಶೇ 40.3ರಷ್ಟು ಮತ ಹಂಚಿಕೆ 

 Uttarakhand Results: ಬಿಜೆಪಿ –ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿನ ಪೈಪೋಟಿ  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು