ಸೋಮವಾರ, ಅಕ್ಟೋಬರ್ 25, 2021
25 °C

ವಿಧಾನಸಭಾ ಅಧಿವೇಶನವನ್ನು 15 ದಿನಗಳಿಗೆ ವಿಸ್ತರಿಸಲು ಸಿದ್ದರಾಮಯ್ಯ ಆಗ್ರಹ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಳೂರು: ರಾಜ್ಯ ವಿಧಾನ ಮಂಡಲದ ಅಧಿವೇಶನವನ್ನು 15 ದಿನಗಳಿಗೆ ವಿಸ್ತರಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭಾಧ್ಯಕ್ಷರಿಗೆ ಸೋಮವಾರ ಪತ್ರ ಬರೆದಿದ್ದಾರೆ. 

ವಿಧಾನಸಭಾಧ್ಯಕ್ಷರಿಗೆ ಬರೆದ ಪತ್ರದ ಪ್ರತಿಯನ್ನು ಅವರು ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲೂ ಹಂಚಿಕೊಂಡಿದ್ದಾರೆ.   

ಕೊರೊನಾ ಎರಡನೆ ಅಲೆ, ರಾಷ್ಟ್ರೀಯ ಶಿಕ್ಷಣ ನೀತಿ, ಕುಸಿದಿರುವ ಕಾನೂನು ಸುವ್ಯವಸ್ಥೆ ಮುಂತಾದ ಗಂಭೀರ ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಬೇಕಿರುವುದರಿಂದ ವಿಧಾನಸಭಾ ಅಧಿವೇಶನವನ್ನು 15 ದಿನಗಳಿಗೆ ವಿಸ್ತರಿಸಬೇಕು ಎಂದು ಮಾನ್ಯ ವಿಧಾನಸಭಾ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು