ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

29 ಸಾವಿರ ಶಾಲೆಗಳ ಆಸ್ತಿ ದಾಖಲೆ ಸಮರ್ಪಕ: ಸಚಿವ ಬಿ.ಸಿ. ನಾಗೇಶ್

Last Updated 25 ಆಗಸ್ಟ್ 2022, 20:51 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿರುವ 48 ಸಾವಿರ ಸರ್ಕಾರಿ ಶಾಲೆಗಳ ಪೈಕಿ ಸುಮಾರು 29 ಸಾವಿರ ಶಾಲೆಗಳ ಆಸ್ತಿ ದಾಖಲೆಗಳು ಸಮರ್ಪಕವಾಗಿವೆ. ಉಳಿದ ಶಾಲೆಗಳ ಆಸ್ತಿ ನೋಂದಣಿಗೆ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದ ಬಳಿಕ ಮಾತನಾಡಿದರು.

‘ಆಗಸ್ಟ್‌ನಿಂದ ಅಕ್ಟೋಬರ್‌ವರೆಗೆ ಸರ್ಕಾರಿ ಶಾಲಾ, ಕಾಲೇಜುಗಳ ಆಸ್ತಿ ಸಂರಕ್ಷಣಾ ಅಭಿಯಾನ ನಡೆಸಲಾಗುತ್ತಿದೆ. ಶಾಲೆಯ ಆಸ್ತಿ ದಾಖಲೆಗಳನ್ನು ಕ್ರಮಬದ್ಧಗೊಳಿಸಿ ನೋಂದಣಿ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಂದಾಯ ಇಲಾಖೆ ಮತ್ತು ಸಂಬಂಧಪಟ್ಟ ಇತರ ಇಲಾಖೆಗಳ ಸಂಯೋಜನೆಯಲ್ಲಿ ಈ ಕಾರ್ಯ ನಡೆಯಲಿದೆ’ ಎಂದರು.

‘ಕಾನೂನಾತ್ಮಕ ಸಮಸ್ಯೆಗಳು, ಶಿಕ್ಷಣ ಇಲಾಖೆಯ ಆಸ್ತಿಯಾಗಿದ್ದರೂ ನೋಂದಣಿಯಾಗದೇ ಇರುವುದು, ಇತರ ಇಲಾಖೆಗಳಿಂದ ಶಿಕ್ಷಣ ಇಲಾಖೆಗೆ ನೀಡಿರುವುದು, ಖಾಸಗಿ ಸಂಸ್ಥೆ, ವ್ಯಕ್ತಿಗಳಿಂದ ದಾನ ಪಡೆದಿರುವುದು ಸೇರಿದಂತೆ ಎಲ್ಲ ರೀತಿಯ ಶಾಲೆಗಳ ಆಸ್ತಿಯನ್ನು ನೋಂದಣಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.

‘ಚಿಕ್ಕಪೇಟೆಯಲ್ಲಿ 1945 ರಿಂದ ನಡೆಯುತ್ತಿರುವ ಸರ್ಕಾರಿ ಶಾಲೆಯ ಆಸ್ತಿ ದಾಖಲೆಗಳನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸುವಂತೆ ಕಂದಾಯ ಇಲಾಖೆಗೆ ಕೋರಲಾಗಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ’ ಎಂದೂ ನಾಗೇಶ್ ತಿಳಿಸಿದರು.

‘ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ವಿಶೇಷ ಕ್ರಮ ವಹಿಸಿದ ಪರಿಣಾಮ ಕೆಲವೇ ತಿಂಗಳುಗಳಲ್ಲಿ ಸುಮಾರು 2,500ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಆಸ್ತಿಗಳು ನೋಂದಣಿ ಆಗಿವೆ’ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT