ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಧಕೇತರ ಉದ್ದೇಶಕ್ಕೆ ನಿಯೋಜನೆ: ಹೈಕೋರ್ಟ್ ನೋಟಿಸ್

Last Updated 21 ಜನವರಿ 2021, 17:42 IST
ಅಕ್ಷರ ಗಾತ್ರ

ಬೆಂಗಳೂರು: ಬೋಧನಾ ಸಿಬ್ಬಂದಿಯನ್ನು ಬೋಧಕೇತರ ಉದ್ದೇಶಗಳಿಗೆ ನಿಯೋಜನೆ ಮತ್ತು ವರ್ಗಾವಣೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.

‘ಈ ರೀತಿ ನಿಯೋಜನೆ ಮಾಡುವುದು ಶಿಕ್ಷಣ ಹಕ್ಕು(ಆರ್‌ಟಿಇ) ಕಾಯ್ದೆ ಮತ್ತು ಸುಪ್ರೀಂ ಕೋರ್ಟ್‌ ಆದೇಶಗಳ ಉಲ್ಲಂಘನೆ’ ಎಂದು ಆರೋಪಿಸಿ ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

‘ಬೋಧನಾ ಸಿಬ್ಬಂದಿಯನ್ನು ಬೋಧಕೇತರ ಉದ್ದೇಶಗಳಿಗೆ ನಿಯೋಜಿಸುವ ಹಲವು ಆದೇಶಗಳನ್ನು ಹೊರಡಿಸಲಾಗಿದೆ. ಇವು ರಾಜಕೀಯ ಪ್ರೇರಿತ ಪ್ರಕರಣಗಳೂ ಇವೆ’ ಎಂದು ಅರ್ಜಿದಾರರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT