ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಂಡ್ಯ ಭವನ’ ನಿರ್ಮಾಣಕ್ಕೆ ನೆರವು: ಸಚಿವ ನಾರಾಯಣಗೌಡ ಭರವಸೆ

Last Updated 9 ಜೂನ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ರಾಜಧಾನಿಯಲ್ಲಿ ‘ಮಂಡ್ಯ ಭವನ’ ನಿರ್ಮಾಣಕ್ಕೆ ಸಹಕಾರ ಕೋರಿದರೆ ನೆರವು ನೀಡಲಾಗುವುದು ಎಂದು ಸಚಿವ ಕೆ.ಸಿ.ನಾರಾಯಣಗೌಡ ಭರವಸೆ ನೀಡಿದರು.

ನಗರದ ಒಕ್ಕಲಿಗರ ಸಂಘದ ಆವರಣದ ಕುವೆಂಪು ಸಭಾಂಗಣದಲ್ಲಿ ಗುರುವಾರ ಮಂಡ್ಯ ಜಿಲ್ಲಾ ಅನಿವಾಸಿಗಳ ಬಳಗದ ಬೆಂಗಳೂರು ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಂಡ್ಯ ಜಿಲ್ಲೆಗೆ ವಿಶೇಷ ಸ್ಥಾನವಿದೆ. ಉದ್ಯೋಗಕ್ಕೆ ಅನೇಕರು ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಮಂಡ್ಯ ಭವನ ನಿರ್ಮಾಣಕ್ಕೆ ಮುಂದಾದಲ್ಲಿ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಆದಿಚುಂಚನಗಿರಿ ಮಠ ಧಾರ್ಮಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಮಂಡ್ಯ ಜಿಲ್ಲೆಯ ಅಂದಾಜು 16 ಸಾವಿರ ಮಂದಿ ಮುಂಬೈನಲ್ಲಿ ನೆಲೆಸಿದ್ದು, ಮಠದ ಜತೆಗೂ ಉತ್ತಮ ಸಂಪರ್ಕ ಹೊಂದಿದ್ದಾರೆ ಎಂದು ತಿಳಿಸಿದರು.

ಜಾನಪದ ಲೋಕದ ಅಧ್ಯಕ್ಷ ಟಿ.ತಿಮ್ಮೇಗೌಡ ಮಾತನಾಡಿ, ‘ಸಕ್ಕರೆ ನಾಡಿನ ಒಳಿತಿಗಾಗಿ ಇಂತಹ ಸಂಘವೊಂದರ ಅಗತ್ಯವಿತ್ತು. ಜಾತಿ,
ಭೇದವಿಲ್ಲದೆ ಎಲ್ಲ ಸಮಾಜದವರನ್ನು ಒಳಗೊಂಡು ಈ ಸಂಘ ಮುನ್ನೆಡಯಬೇಕು’ ಎಂದು ಆಶಿಸಿದರು.

ಮಂಡ್ಯ ಜಿಲ್ಲೆಯ ಸಮಗ್ರ ಏಳಿಗೆಗೆ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಂಘದ ಅಧ್ಯಕ್ಷ ಮುಟ್ಟನಹಳ್ಳಿ ಶಿವರಾಮೇಗೌಡ ಹೇಳಿದರು.

ಆದಿಚುಂಚನಗಿರಿಯ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ, ಪ್ರೊ.ಕೃಷ್ಣೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT