ಸೋಮವಾರ, ಜನವರಿ 24, 2022
23 °C

ಫಿನ್‌ಟೆಕ್‌ಗಳಿಗೆ ಅಗತ್ಯ ನೆರವು: ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‌ಬೆಂಗಳೂರು: ‘ಫಿನ್‌ಟೆಕ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆ ಬಂದರೆ, ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡಲಾಗುವುದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಇನ್‌ಸ್ಟಿಟ್ಯೂಟ್‌ ಆಫ್ ವ್ಯಾಲ್ಯೂವರ್ಸ್ (ಐಇವಿ) ಹಾಗೂ ಭಾರತೀಯ ಹಣಕಾಸು ನಷ್ಟ ಮತ್ತು ದಿವಾಳಿ ಮಂಡಳಿ (ಐಬಿಬಿಐ) ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಭಾರತೀಯ ಮೌಲ್ಯಮಾಪಕರ ಸಮಾವೇಶ’ ಹಾಗೂ  ‘ಮೌಲ್ಯಮಾಪನ ಪರಿಸರ ವ್ಯವಸ್ಥೆಯನ್ನು ಪರಿವರ್ತಿಸುವುದು’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

‘ಕರ್ನಾಟಕ ದೇಶದಲ್ಲೇ ‌ಅತ್ಯಂತ ಜನಪ್ರಿಯ ಹಣಕಾಸು ತಂತ್ರಜ್ಞಾನ ಕಂಪನಿಗಳ ನೆಲೆಯಾಗಿದೆ. ರಾಜ್ಯದಲ್ಲಿ ಅತ್ಯುತ್ತಮ ಆರ್ಥಿಕ ಕೈಗಾರಿಕಾ ಪರಿಸರ ವ್ಯವಸ್ಥೆ ನಿರ್ಮಿಸುವುದು ನಮ್ಮ ಮೊದಲ ಆದ್ಯತೆ. ಮೂಲಸೌಕರ್ಯ ಮತ್ತು ಉದಯೋನ್ಮುಖ ಕೈಗಾರಿಕೆಗಳಲ್ಲಿ ಕರ್ನಾಟಕವನ್ನು ಅಗ್ರಸ್ಥಾನಕ್ಕೆ ಏರಿಸುವುದು ನಮ್ಮ ಗುರಿ’ ಎಂದರು.

‘ಉದ್ಯಮಶೀಲ ಪರಿಸರ ವ್ಯವಸ್ಥೆಯು ಯುವ ವೃತ್ತಿಪರರು ಉದ್ಯೋಗದಾತರಾಗಲು ಹಾಗೂ ವಿವಿಧ ಕ್ಷೇತ್ರಗಳನ್ನು ಅನ್ವೇಷಿಸಲು ಅನುವು ಮಾಡಿಕೊಡುತ್ತದೆ. ಹಾಗಾಗಿ, ಉದ್ಯೋಗದಾತರಾಗಿ ರಾಜ್ಯದಲ್ಲಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲು ಸರ್ಕಾರ ಬಯಸುತ್ತದೆ’ ಎಂದು ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ವೇಣುಗೋಪಾಲ್ ಹಾಗೂ ಇತರರು ಭಾಗವಹಿಸಿದ್ದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು