ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಾಯಕ ಪ್ರಾಧ್ಯಾಪಕ: ತಲಾ ₹35 ಲಕ್ಷದಿಂದ ₹ 75 ಲಕ್ಷ ವಸೂಲಿ, ದೂರು

Last Updated 7 ಮೇ 2022, 18:32 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ವಿವಿಧ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮ ನಡೆದಿದ್ದು, ಈ ಬಗ್ಗೆ ವಿಸ್ತೃತತನಿಖೆ ನಡೆಸಬೇಕು’ ಎಂದು ಒತ್ತಾಯಿಸಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್‌ ಹಾಗೂ ಇತರರು ಮಲ್ಲೇಶ್ವರ ಠಾಣೆಗೆ ಶನಿವಾರ ದೂರು ನೀಡಿದ್ದಾರೆ.

‘ಅರ್ಥಶಾಸ್ತ್ರ, ಸಮಾಜಶಾಸ್ತ್ರ ಹಾಗೂ ಇಂಗ್ಲಿಷ್ ವಿಷಯದ ಪರೀಕ್ಷೆಯಲ್ಲೂ ಅಕ್ರಮನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಒಎಂಆರ್‌ ತಿದ್ದಿ ಅಕ್ರಮವಾಗಿ ಹುದ್ದೆಗೆ ಆಯ್ಕೆ ಮಾಡುವುದಕ್ಕಾಗಿ 600 ಅಭ್ಯರ್ಥಿಗಳಿಂದ ತಲಾ ₹ 35 ಲಕ್ಷದಿಂದ ₹ 75 ಲಕ್ಷ ಸಂಗ್ರಹಿಸಿರುವ ಮಾತುಗಳು ಕೇಳಿಬರುತ್ತಿವೆ.’

‘ಪರೀಕ್ಷೆ ಅಕ್ರಮದ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್, ಕೆಎಸ್‌ಒಯು ಕುಲಸಚಿವ ರಾಜಣ್ಣ, ನಿವೃತ್ತ ಪ್ರಾಧ್ಯಾಪಕ ಶಿವಲಿಂಗಯ್ಯ, ಪ್ರಾಧ್ಯಾಪಕ ಅಪ್ಪಾಜಿಗೌಡ ಹಾಗೂ ಇತರರನ್ನು ವಿಚಾರಣೆ ಮಾಡಬೇಕು. ನಿಜಾಂಶವನ್ನು ಪತ್ತೆ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದೂ ದೂರಿನಲ್ಲಿ ಆಗ್ರಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT