ಬಜರಂಗದಳ ಮುಖಂಡನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಬಂಧನ: ಬೊಮ್ಮಾಯಿ

ಉಡುಪಿ: ಶಿವಮೊಗ್ಗದಲ್ಲಿ ಬಜರಂಗದಳ ಮುಖಂಡನ ಮೇಲೆ ನಡೆದ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದ್ದು, ಸಧ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಲ್ಪೆ ಸೀವಾಕ್ ಬಳಿ ಗುರುವಾರ ರಾತ್ರಿ ಬಯಲು ರಂಗಮಂದಿರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಶಿವಮೊಗ್ಗದ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗಲಾಟೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಮುಂದೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪೂರ್ವವಲಯ ಐಜಿಪಿ ಹಾಗೂ ಎಸ್‌ಪಿ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಕರ್ಫ್ಯೂ ಜಾರಿಗೆ ಸೂಚನೆ ನೀಡಿದ್ದೇನೆ’ ಎಂದರು.
ಶುಕ್ರವಾರ ಸಚಿವ ಈಶ್ವರಪ್ಪ ಹಾಗೂ ಸಂಸದ ರಾಘವೇಂದ್ರ ಶಾಂತಿ ಸಭೆ ನಡೆಸಲಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.