ಶನಿವಾರ, ಆಗಸ್ಟ್ 20, 2022
21 °C

ಪೊಲೀಸರ ಮೇಲೆ ಹಲ್ಲೆ: ಎಂಎಲ್‌ಸಿ ನಾಸೀರ್ ಅಹ್ಮದ್ ಪುತ್ರ ಸೇರಿ ಮೂವರು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Arrest

ಬೆಂಗಳೂರು: ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಧಾನ ಪರಿಷತ್ ಸದಸ್ಯ ನಾಸೀರ್ ಅಹ್ಮದ್ ಅವರ ಪುತ್ರ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.

‘ಹೆಬ್ಬಾಳ ಸಮೀಪದ ಬಿಎಂಟಿಸಿ ಡಿಪೊ ಬಳಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಪಾನಮತ್ತರಾಗಿದ್ದ ಎಂಎಲ್‌ಸಿ ಪುತ್ರ ಹಾಗೂ ಅವರ ಇಬ್ಬರು ಸ್ನೇಹಿತರು ಕಾರಿನಲ್ಲಿ ಬರುತ್ತಿದ್ದರು. ಅವರ ಬಗ್ಗೆ ಅನುಮಾನಗೊಂಡ ಗಸ್ತಿನಲ್ಲಿದ್ದ ಇಬ್ಬರು ಪೊಲೀಸರು, ಕಾರು ತಡೆದು ಪರಿಶೀಲನೆ ನಡೆಸಲು ಮುಂದಾಗಿದ್ದರು. ಮೂವರು, ಮದ್ಯ ಕುಡಿದಿದ್ದು ಗೊತ್ತಾಗಿತ್ತು. ಅದನ್ನು ಪೊಲೀಸರು ಪ್ರಶ್ನಿಸಿದ್ದರು.’

‘ಪೊಲೀಸರ ಮೇಲೆಯೇ ಹರಿಹಾಯ್ದಿದ್ದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಸಮವಸ್ತ್ರ ಹಿಡಿದು ಎಳೆದಾಡಿ ಹಲ್ಲೆ ಸಹ ಮಾಡಿದ್ದರು. ಠಾಣೆಗೆ ಕರೆ ಮಾಡಿದ್ದ ಪೊಲೀಸರು, ಹೆಚ್ಚುವರಿ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡು ಮೂವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದರು’ ಎಂದೂ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು