ಗುರುವಾರ , ಜೂನ್ 24, 2021
24 °C

‘ಎಲ್ಲಿ ₹5 ಸಾವಿರ?’: ನಾಳೆ ಆಟೊ ಚಾಲಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಲಾಕ್‍ಡೌನ್ ಪರಿಹಾರವಾಗಿ ಎಲ್ಲ ಆಟೊ ಚಾಲಕರಿಗೆ ₹5 ಸಾವಿರ ಪರಿಹಾರಧನ ನೀಡದೆ ರಾಜ್ಯ ಸರ್ಕಾರ ವಂಚಿಸಿದೆ. ಇದನ್ನು ಖಂಡಿಸಿ ‘ಎಲ್ಲಿ ₹5 ಸಾವಿರ’ ಎಂಬ ಘೋಷವಾಕ್ಯದೊಂದಿಗೆ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಇದೇ 19ರಂದು ಪ್ರತಿಭಟಿಸಲಾಗುವುದು’ ಎಂದು ಆಮ್ ಆದ್ಮಿ ಪಕ್ಷದ ಆಟೊ ಘಟಕದ ಅಧ್ಯಕ್ಷ ಅಯೂಬ್ ಖಾನ್ ತಿಳಿಸಿದರು.

‘ಪ್ರತಿಭಟನೆಗೆ ಆಟೊ ಚಾಲಕರ 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆದರ್ಶ ಆಟೊ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂಪತ್, ‘ರಾಜ್ಯದಲ್ಲಿ ಏಳು ಲಕ್ಷಕ್ಕೂ ಹೆಚ್ಚು ಆಟೊ ಚಾಲಕರಿದ್ದಾರೆ. ಇವರಲ್ಲಿ 3.5 ಲಕ್ಷ ಮಂದಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿದ್ದರು. 40 ಸಾವಿರ ಚಾಲಕರಿಗೆ ಮಾತ್ರ ಸರ್ಕಾರ ಪರಿಹಾರ ನೀಡಿದ್ದು, ಉಳಿದವರಿಗೆ ಪರಿಹಾರ ಸಿಕ್ಕಿಲ್ಲ’ ಎಂದು ದೂರಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು