ಗುರುವಾರ , ಜನವರಿ 28, 2021
27 °C

‘ಅವ್ವ’ ಪ್ರಶಸ್ತಿಗೆ ರಂಗಕರ್ಮಿ ಬಿ.ಜಯಶ್ರೀ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಗ್ಗಾವಿ: ಹುಬ್ಬಳ್ಳಿಯ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ವತಿಯಿಂದ ನೀಡುವ ‘ಅವ್ವ’ ಪ್ರಶಸ್ತಿಗೆ  ರಂಗಕರ್ಮಿ ಬಿ.ಜಯಶ್ರೀ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ₹25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಎಚ್.ಆರ್.ಸುಜಾತಾ ಅವರ ‘ನೀಲಿ ಮೂಗಿನ ನತ್ತು’ ಕೃತಿಗೆ ಅಕ್ಕ ಪ್ರಶಸ್ತಿ, ಸನ್ನಿಧಿ ಟಿ.ರೈ ಪೆರ್ಲ ಅವರ ‘ಅಮರಾವತಿ ಕೃತಿ’ಗೆ ಅರಳುಮೊಗ್ಗು ಪ್ರಶಸ್ತಿ ಹಾಗೂ ಡಾ.ಕೆ.ಶಶಿಕಾಂತ ಅವರ ‘ಅವ್ವ ಹಾಡಿದ ಕಾಳಿಂಗರಾಯನ ಹಾಡು’ ಕೃತಿಗೆ ಜಾನಪದ ಸಿರಿ ಪ್ರಶಸ್ತಿ ಆಯ್ಕೆಯಾಗಿದೆ. ಲೇಖಕ ಚಂದ್ರಶೇಖರ ವಸ್ತ್ರದ ಸಂಪಾದಿಸಿದ ‘ನಾಟಕಗಳಲ್ಲಿ ಅವ್ವ’ ಕೃತಿಯನ್ನು ಧಾರವಾಡ ಖ್ಯಾತ ಸಂಶೋಧಕ, ಸಾಹಿತಿ ಡಾ.ವೀರಣ್ಣ ರಾಜೂರ ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ.

ಜ.10ರಂದು ಸಂಜೆ 4ಗಂಟೆಗೆ ತಾಲ್ಲೂಕಿನ ಶಿಶುವಿನಹಾಳ ಗುರು ಗೋವಿಂದ ಭಟ್ಟ ಹಾಗೂ ಸಂತ ಶಿಶುವಿನಹಾಳ ಶರೀಫ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಿಡುಗಡೆ ಸಮಾರಂಭ ಜರುಗಲಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಶಿವಕುಮಾರ ಉದಾಸಿ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ ಪಾಲ್ಗೊಳ್ಳುವರು ಎಂದು ಟ್ರಸ್ಟ್ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು