ಶುಕ್ರವಾರ, ಮೇ 27, 2022
23 °C

‘ಡಾ.ಶಿಮೂಶ ಪ್ರಶಸ್ತಿ’ಗೆ ಮಲ್ಲಿಕಾ ಘಂಟಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಅವರು ಹಾವೇರಿ ಹೊಸಮಠದ ‘ಡಾ.ಶಿಮೂಶ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

‘ಡಿ.27ರಂದು ಸಂಜೆ 6ಕ್ಕೆ ಹೊಸಮಠದಲ್ಲಿ ನಡೆಯುವ ಶರಣ ಸಂಸ್ಕೃತಿ ಉತ್ಸವದಲ್ಲಿ ಚಿತ್ರದುರ್ಗದ ಬೃಹನ್ಮಠದ ಮುರುಘರಾಜೇಂದ್ರ ಸ್ವಾಮೀಜಿ, ಶೂನ್ಯಪೀಠದ ಅಧ್ಯಕ್ಷ ಡಾ.ಶಿವಮೂರ್ತಿ ಮುರುಘಾ ಶರಣರು ಪ್ರಶಸ್ತಿ ಪ್ರದಾನ ಮಾಡುವರು’ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪ್ರಶಸ್ತಿಯು ₹ 50 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. 10 ಜನ ಸಾಧಕರಿಗೆ ಈ ಹಿಂದೆ ಪ್ರಶಸ್ತಿ ನೀಡಲಾಗಿದೆ. ಮೊದಲ ಬಾರಿಗೆ ಮಹಿಳಾ ಸಾಧಕಿಗೆ ನೀಡಲಾಗುತ್ತಿದೆ.’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು