ಭಾನುವಾರ, ನವೆಂಬರ್ 29, 2020
19 °C

ಕೊರೊನಾ ಆತಂಕದ ನಡುವೆ ಆಯುಧ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಆತಂಕದ ನಡುವೆಯೂ ರಾಜ್ಯದೆಲ್ಲೆಡೆ ಭಾನುವಾರ ಆಯುಧ ಪೂಜೆ ಆಚರಿಸಲಾಗುತ್ತಿದೆ. 

ಆಯುಧ ಪೂಜೆಯ ದಿನವಾದ ಇಂದು ಜನರು ವಾಹನಗಳಿಗೆ ಬಾಳೆ ಕಂದು ಕಟ್ಟಿ, ಹೂವಿನ ಮಾಲೆ ಹಾಕಿ ಅಲಂಕರಿಸಿ ಪೂಜೆ ಸಲ್ಲಿಸಿದರು.

ದೇವಾಲಯಗಳಲ್ಲಿ ವಾಹನಗಳ ಪೂಜೆಗಾಗಿ ವಿಶೇಷ ಏರ್ಪಾಡು ಮಾಡಲಾಗಿತ್ತು. ಸರತಿ ಸಾಲಿನಲ್ಲಿ
ನಿಂತು ವಾಹನಗಳಿಗೆ ಪೂಜೆ ಮಾಡಿಸಿಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು. ಜನರು ಯಂತ್ರೋ ಪಕರಣಗಳಿಗೂ ಪೂಜೆ ಮಾಡಿದರು.

ಮೈಸೂರಿನಲ್ಲಿ ಯದುವೀರ್ ಒಡೆಯರ್‌  ಅವರು ಅರಮನೆಯಲ್ಲಿ ಆಯುಧ ಪೂಜೆ ನೆರವೇರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು