ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ ವೈದ್ಯರು’

ವಿಶ್ವ ಹೋಮಿಯೋಪಥಿ ದಿನಾಚರಣೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್
Last Updated 30 ಡಿಸೆಂಬರ್ 2020, 21:00 IST
ಅಕ್ಷರ ಗಾತ್ರ

ಬೆಂಗಳೂರು: ‌‘ಆಯುಷ್ ಚಿಕಿತ್ಸಾ ಪದ್ಧತಿಗೆ ಪ್ರೋತ್ಸಾಹ ನೀಡಲು ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಬ್ಬರು ಆಯುಷ್ ವೈದ್ಯರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಗರದಲ್ಲಿ ಬುಧವಾರ ಆಯೋಜಿಸಿದ ವಿಶ್ವ ಹೋಮಿಯೋಪಥಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಪ್ರಾಥಮಿಕ ಚಿಕಿತ್ಸಾ ಪದ್ಧತಿ ಹಾಗೂ ಗುಣಮಟ್ಟದ ವೈದ್ಯಕೀಯ ಶಿಕ್ಷಣ ಪದ್ಧತಿಗೆ ವಿಶೇಷ ಆದ್ಯತೆ ನೀಡಬೇಕಿದೆ. 3ಡಿ ವಿಧಾನದ ಮೂಲಕ ಬೋಧಿಸುವ ವ್ಯವಸ್ಥೆ ಬಂದಿದೆ. ಅಂತಹ ತಂತ್ರಜ್ಞಾನಗಳನ್ನು ಶಿಕ್ಷಣ ಸಂಸ್ಥೆಗಳು ಅಳವಡಿಸಿಕೊಳ್ಳಬೇಕು. ಇತ್ತೀಚೆಗೆ ಅನೇಕ ರೋಗಗಳು ಬದಲಾದ ಜೀವನಶೈಲಿಯಿಂದ ಕೂಡ ಬರುತ್ತಿವೆ. ಹಾಗಾಗಿ ಉತ್ತಮವಾದ ಜೀವನಶೈಲಿಯನ್ನು ಅಳವಡಿಸಿಕೊಂಡು ಆಹಾರ ಪದ್ಧತಿ ಬದಲಾಯಿಸಿಕೊಳ್ಳಬೇಕು. ವೃತ್ತಿ ಬದುಕಿನ ಕಾರ್ಯದೊತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಜೀವನಶೈಲಿಯಿಂದ ಸಮಸ್ಯೆ: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ‘ಜನರ ಅಪೇಕ್ಷೆ, ನಿರೀಕ್ಷೆ ಹಾಗೂ ಜೀವನಶೈಲಿ ಬದಲಾಗಿದೆ. ದೇಶದಲ್ಲಿ ಶೇ 50ರಷ್ಟು ಸಾವಿನ ಪ್ರಕರಣಗಳು ಜೀವನಶೈಲಿ ಬದಲಾವಣೆಗೆ ಸಂಬಂಧಿಸಿದ್ದಾಗಿವೆ. ಸಾಂಕ್ರಾಮಿಕವಲ್ಲದ ರೋಗಗಳಿಂದ ಮೃತಪಡುವವರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಔಷಧಗಳನ್ನು ಸಂಶೋಧಿಸಲಾಗುತ್ತಿದೆ. ಇದೇ ವೇಳೆ ಕಾಯಿಲೆಗಳು ಕೂಡ ಅಧಿಕವಾಗುತ್ತಿವೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT