ಆಯುಷ್ಮಾನ್ ಭಾರತ: ಕಿದ್ವಾಯಿಗೆ ಮೊದಲ ಸ್ಥಾನ
ಬೆಂಗಳೂರು: ‘ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ’ ಯೋಜನೆಯಡಿ ಉತ್ತಮ ಸೇವೆ ಒದಗಿಸಿದ ಆಸ್ಪತ್ರೆಗಳಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಮೊದಲ ಸ್ಥಾನ ಪಡೆದುಕೊಂಡಿದೆ.
‘ಕೋವಿಡ್ ನಡುವೆಯೂ 2019–20ನೇ ಸಾಲಿನಲ್ಲಿ ಸಂಸ್ಥೆಯು ಯೋಜನೆಯಡಿ 10,136 ಮಂದಿಗೆ ಚಿಕಿತ್ಸೆ ಒದಗಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಸಾಸ್ಟ್) ರಾಜ್ಯದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ ಆರು ಆಸ್ಪತ್ರೆಗಳನ್ನು ಗುರುತಿಸಿದೆ. ಅದರಲ್ಲಿ ಮೊದಲ ಸ್ಥಾನವನ್ನು ನಮ್ಮ ಸಂಸ್ಥೆಯು ಪಡೆದುಕೊಂಡಿದೆ. ಕೋವಿಡ್ ಕಾಯಿಲೆ ಕಾಣಿಸಿಕೊಂಡ ಬಳಿಕವೂ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕ್ಯಾನ್ಸರ್ ರೋಗಿಗಳಿಗೆ ಸಮಸ್ಯೆಯಾಗದಂತೆ ಸೇವೆ ನೀಡಲಾಯಿತು. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಇಲ್ಲಿ ಸೇವೆ ಪಡೆದುಕೊಂಡರು’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ. ರಾಮಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.