ಬೆಂಗಳೂರು: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಹಾಗೂ ಸಮರ್ಥ ಆಡಳಿತ ನೀಡಲು ವಿಫಲವಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದರು.

ನೂತನವಾಗಿ ನೇಮಕಗೊಂಡ ಬಳಿಕ ರಾಜ್ಯಕ್ಕೆ ಬಂದ ಅವರು, ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಸಿದ್ದರಾಮಯ್ಯ ಮಾತನಾಡಿ, ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುರ್ಜೇವಾಲಾ ಮಾತನಾಡಿದ್ದಾರೆ. ದುರಾಡಳಿತ, ಭ್ರಷ್ಟಾಚಾರ ಎರಡೂ ಒಟ್ಟಿಗೆ ಹೋಗುತ್ತವೆ ಅಂತ ಮಹಾತ್ಮ ಗಾಂಧಿ ಹೇಳಿದ್ದರು ಎಂದರು.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಶಾಸಕ ದಿನೇಶ್ ಗುಂಡೂರಾವ್, ಎಚ್.ಕೆ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ ಜಾರಕಿಹೊಳಿ, ಸಲೀಂ ಅಹ್ಮದ್, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.