ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ವರ್ಷ‌ ಯಡಿಯೂರಪ್ಪ ಅವರೇ ಸಿಎಂ: ಸಂಸದ ಜಿ.ಎಂ. ಸಿದ್ದೇಶ್ವರ

Last Updated 28 ಆಗಸ್ಟ್ 2020, 11:00 IST
ಅಕ್ಷರ ಗಾತ್ರ

ದಾವಣಗೆರೆ: ಮುಖ್ಯಮಂತ್ರಿ ಯಡಿಯೂರಪ್ಪ ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿದ್ದಾರೆ. ಮುಂದಿನ ಮೂರು ವರ್ಷ ಅವರೇ ಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎಂದು ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರ ಆಢಳಿತದಲ್ಲಿಯಾವುದೇ ಭ್ರಷ್ಟಾಚಾರ ನಡೆದಿಲ್ಲ. ವಿಜಯೇಂದ್ರ ವಿರುದ್ಧ ಆರೋಪದ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಪಕ್ಷದ ಶಾಸಕರೂ ವಿಜಯೇಂದ್ರ ಅವರ ಕುರಿತು ಪತ್ರ ಬರೆದಿಲ್ಲ. ವಿರೋಧ ಪಕ್ಷದವರು ಮಾತನಾಡಬೇಕು ಮಾತನಾಡಿದ್ದಾರೆ. ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಶುಕ್ರವಾರ ಮಾಧ್ಯಮದವರಿಗೆ ತಿಳಿಸಿದರು.

‘ನಮ್ಮಲ್ಲಿ ಮೂಲ, ವಲಸೆ ಬಂದವರು ಎಂಬುದೇ ಇಲ್ಲ. ಒಮ್ಮೆ ಪಕ್ಷಕ್ಕೆ ಬಂದ ಮೇಲೆ ಎಲ್ಲರೂ ಮೂಲ ಬಿಜೆಪಿಯವರು. ಎಚ್. ವಿಶ್ವನಾಥ್‌ಗೆ ಪಕ್ಷದ ಸಿದ್ದಾಂತ ತಿಳಿದಿದೆ. ಮಾಧ್ಯಮದವರು ಏನೇನೋ ಕೇಳಿದಾಗ ಏನೋ ಹೇಳಿರಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಅಲ್ಲ ನಮ್ಮ ಜಿಲ್ಲೆಯವರೇ ಮುಖ್ಯಮಂತ್ರಿ ಆದರೆ ಬೇಡ ಅನ್ನಲಿಕ್ಕಾಗುವುದಿಲ್ಲ. ಹಾಗೆ ನಮ್ಮ ಜಿಲ್ಲೆಯವರೇ ಉಸ್ತುವಾರಿ ಆದರೆ ಬೇಡ ಎನ್ನುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಕುರಿತು ರೇಣುಕಾಚಾರ್ಯ ನಿವಾಸದಲ್ಲಿ ನಡೆದ ಸಭೆಯ ಬಗ್ಗೆ ನನಗೆ ಗೊತ್ತೇ ಇಲ್ಲ. ಸಭೆಗೆ ನನ್ನನ್ನೂ ಕರೆದೂ ಇಲ್ಲ’ ಎಂದರು.

ಆಸ್ಪತ್ರೆಗಳ ಪಟ್ಟಿ ಕೊಡಿ:ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಳಲ್ಲಿ ಜನ ಸಾಮಾನ್ಯರಿಗೆ ಚಿಕಿತ್ಸೆ ನಿರಾಕರಿಸಿರುವ ಆಸ್ಪತ್ರೆಗಳ ಪಟ್ಟಿಕೊಟಿ, ಆ ಆಸ್ಪತ್ರೆಗಳ ವಿರುದ್ಧ ಕ್ರಮ ವಹಿಸುವಂತೆಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ.ಕೋವಿಡ್ ಇರಲಿ ನಾನ್ ಕೋವಿಡ್ ರೋಗಿಗಳೇ ಸೂಕ್ತ ಚಿಕಿತ್ಸೆ ಸಿಗಬೇಕು’ ಎಂದರು.

‘ಜಿಲ್ಲೆಯಲ್ಲಿ ವೆಂಟಿಲೇಟರ್ ಕೊರತೆ ಇಲ್ಲ. ಆದರೆ ವೈದ್ಯರು ಹಾಗೂ ನರ್ಸ್‌ಗಳ ಕೊರತೆ ಇದೆ. ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಆರೋಗ್ಯ ಇಲಾಖೆಯ ಆಯುಕ್ತರಿಗೂ ಬೇಡಿಕೆ ಇಟ್ಟಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT