ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಲ್ಯಾಣ’ದಲ್ಲಿ ಕೌಶಲ ವಿ.ವಿ ಸ್ಥಾಪನೆಗೆ ನಿರ್ಧಾರ: ಸಚಿವ ಶ್ರೀರಾಮುಲು ಹೇಳಿಕೆ

371 (ಜೆ) ಸಂಪುಟ ಉಪ ಸಮಿತಿ ಸಭೆಯ ನಂತರ ಸಚಿವ ಶ್ರೀರಾಮುಲು ಹೇಳಿಕೆ
Last Updated 11 ಫೆಬ್ರುವರಿ 2022, 14:47 IST
ಅಕ್ಷರ ಗಾತ್ರ

ಕಲಬುರಗಿ:ಹಿಂದುಳಿದ ಕಲ್ಯಾಣ ಕರ್ನಾಟಕದಲ್ಲಿ ಕೌಶಲ ಅಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಭಾಗದ ಮಾನವ ಸಂಪನ್ಮೂಲ ಸದ್ಬಳಕೆ ಮಾಡಿಕೊಂಡು ಆ ಮೂಲಕ ಸಮಗ್ರ ಅಭಿವೃದ್ಧಿ ಸಾಧಿಸಲು ಇದು ಅಗತ್ಯವೂ ಆಗಿದೆ ಎಂದು 371 (ಜೆ) ಕಲಂ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆಯ ಸಂಪುಟ ಉಪ ಸಮಿತಿಯ ಅಧ್ಯಕ್ಷ ಬಿ.ಶ್ರೀರಾಮುಲು ಹೇಳಿದರು.

ಕಲಬುರಗಿಯಲ್ಲಿ ಶುಕ್ರವಾರ ಸಮಿತಿಯ ಸಭೆಯ ನಂತರ ಮಾತನಾಡಿದ ಅವರು, ಸಾಂಪ್ರಾದಾಯಿಕ ತರಬೇತಿಯ ಬದಲು, ಫಲಿತಾಂಶ ಆಧರಿತ ತರಬೇತಿಯ ಅಗತ್ಯವಿದೆ. ಈಗಿನ ಅಗತ್ಯಗಳಿಗೆ ತಕ್ಕಂತೆ ಯುವಕರಲ್ಲಿ ಕೌಶಲ ಬೆಳೆಸಬೇಕಿದೆ. ಈ ಆಶಯದೊಂದಿಗೆ ಕೌಶಲ ವಿ.ವಿ ಸ್ಥಾಪನೆಗೆ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮೀಸಲಾತಿ: ಕಲ್ಯಾಣ ಕರ್ನಾಟಕ ಭಾಗದವರಿಗೆ ರಾಜ್ಯದ ಇತರೆಡೆ ಉದ್ಯೋಗ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಶೇ 8ರಷ್ಟು ಮೀಸಲಾತಿ ನೀಡಬೇಕು ಎಂಬ ನಿಯಮ ಪಾಲನೆಯಾಗುತ್ತಿಲ್ಲ. ಇದರ ಕಡ್ಡಾಯ ಜಾರಿಗೆ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕದಲ್ಲಿ ಇರುವ ಖಾಲಿ ಹುದ್ದೆಗಳ ಮಾಹಿತಿ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಎಷ್ಟು ನೌಕರರು ಮುಂಬಡ್ತಿಯಿಂದ ವಂಚಿತರಾಗಿದ್ದಾರೆ ಎಂಬ ಮಾಹಿತಿಯನ್ನು ಒಂದು ತಿಂಗಳಲ್ಲಿ ನೀಡುವಂತೆ ಅಧಿಕಾರಿಗಳಿಗೆ ಗಡುವು ನೀಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT