ಗುರುವಾರ , ಜೂನ್ 17, 2021
29 °C

ಬಗರ್‌ಹುಕುಂ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವವರು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ಎರಡು ವರ್ಷ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

‘ಕರ್ನಾಟಕ ಭೂ ಮಂಜೂರಾತಿ (ಎರಡನೇ ತಿದ್ದುಪಡಿ) ನಿಯಮಗಳು–2020’ಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವವರು ಮಂಜೂರಾತಿಗೆ ಕೋರಿ ನಮೂನೆ 50ರಲ್ಲಿ ಅರ್ಜಿ ಸಲ್ಲಿಸಲು ಒಂದು ವರ್ಷ ಅವಕಾಶ ವಿಸ್ತರಿಸಲಾಗಿತ್ತು. ಆ ಬಳಿಕ ಸರ್ಕಾರಗಳು ಬದಲಾದವು. 50 ರ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳ ಇತ್ಯರ್ಥವಾಗಿಲ್ಲ. ಇನ್ನಷ್ಟು ಅವಕಾಶ ಬೇಕು ಎಂಬ ಬೇಡಿಕೆ ಇದ್ದುದರಿಂದ ಅವಧಿ ವಿಸ್ತರಣೆ ಮಾಡಲು ನಿರ್ಧರಿಸಲಾಯಿತು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು