ಸೋಮವಾರ, ಆಗಸ್ಟ್ 8, 2022
23 °C

ಜೈಲಿನ ಅನುಭವ ಇದೆ ಎಂದು ಬಂಧಿಸಿ ಎನ್ನುತ್ತಿದ್ದೀರಾ: ಡಿಕೆಶಿಗೆ ಬಿಜೆಪಿ ಪ್ರಶ್ನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನನ್ನನ್ನು ಬಂಧಿಸಿ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ಜೈಲು ಹಕ್ಕಿಯ ಅನುಭವ ಇದೆ ಎಂಬ ಕಾರಣಕ್ಕಾಗಿ ಬಂಧಿಸಿ ಎನ್ನುತ್ತಿದ್ದೀರಾ ಎಂದು ಪ್ರಶ್ನಿಸಿದೆ.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮನ್ನು ತಾವೇ ವಿಜೃಂಭಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ನನ್ನನ್ನು ಬಂಧಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಡಿಕೆಶಿಯವರೇ ಇದೇನಿದು, ಸಹಾನುಭೂತಿ ಗಿಟ್ಟಿಸಿಕೊಳ್ಳುವ ಹೊಸ ತಂತ್ರವೇ? ಅಥವಾ ಜೈಲು ಹಕ್ಕಿಯ ಅನುಭವ ಇದೆ ಎಂಬ ಕಾರಣಕ್ಕಾಗಿ ಬಂಧಿಸಿ, ಬಂಧಿಸಿ ಎನ್ನುತ್ತಿದ್ದೀರಾ?’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: 

ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ನನ್ನ ಪ್ರಚೋದನೆ ಇದೆ ಎಂದು ಹೇಳುತ್ತಿರುವುದರಿಂದ ನನ್ನನ್ನು ಬಂಧಿಸಲಿ. ಸಚಿವರೇ ನಿಷೇಧಾಜ್ಞೆ ಮುರಿದು ಮೆರವಣಿಗೆ ನಡೆಸಿ ಕಲ್ಲು ಹೊಡೆಸಿದ್ದಾರಲ್ಲ, ಅವರ ಮೇಲೆ ಪ್ರಕರಣ ಏಕಿಲ್ಲ? ಇದಕ್ಕೆ ಖಾಕಿ ತೊಟ್ಟವರು ಉತ್ತರಿಸಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿರುವುದನ್ನು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು