ಬೆಂಗಳೂರು: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತ್ವರಿತವಾಗಿ ತನಿಖೆ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ ಎಂದು ತಿಳಿಸಿದರು.

‘ಕಾಂಗ್ರೆಸ್ ಅನುಭವದ ಮಾತು’

ಇದು ಸರ್ಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, ಕಾಂಗ್ರೆಸ್‌ನವರು ಈ ಹಿಂದೆ ಸರ್ಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳನ್ನು ಆಡಿದ್ದಾರೆ ಎಂದರು.

ದೆಹಲಿ ಪ್ರಯಾಣದ ಬಗ್ಗೆ ಪ್ರತ್ರಕರ್ತರ ಪ್ರಶ್ನೆಗೆ ಉತ್ತರಿಸಿ 'ಸದ್ಯಕ್ಕೆ ದೆಹಲಿಗೆ ಹೋಗುವ ಉದ್ದೇಶ ಇಲ್ಲ' ಎಂದರು.

ಹರ್ಷ ಹತ್ಯೆ ಪ್ರಕರಣ: ಒಟ್ಟು ಎಂಟು ಮಂದಿ ಆರೋಪಿಗಳು ಪೊಲೀಸರ ವಶಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.