ಪಿಎಫ್‌ಐ ನಿಷೇಧ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಲಾದ ಅರ್ಜಿಯ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಈ ಸಂಬಂಧ ಪಿಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಅಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಉಭಯತ್ರರ ವಾದ- ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್ ಹಾಗೂ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.
‘ಹಲವು ಭಯೋತ್ಪಾದಕ ಸಂಘಟ
ನೆಗಳ ಜೊತೆ ನಿಕಟ ಸಂಪರ್ಕವಿದೆ‘ ಎಂಬ ಆರೋಪದ ಹಿನ್ನೆಲೆಯಲ್ಲಿ ಪಿಎಫ್‌ಐ
ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಸೆಪ್ಟೆಂಬರ್ 28ರಂದು ಆದೇಶಿ
ಸಿತ್ತು. ದೇಶದಾದ್ಯಂತ ಸಂಘಟನೆಯ ಕಚೇರಿ, ಅದರ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿದ ನಂತರ ಸರ್ಕಾರ ಈ ಕ್ರಮಕ್ಕೆ ಮುಂದಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.