ಕೊಡಗು ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

ಮಡಿಕೇರಿ: ಕೊಡಗು ಜಿಲ್ಲೆಯಲ್ಲೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಏ.20ರ ತನಕ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಶನಿವಾರ ಆದೇಶಿಸಿದ್ದಾರೆ.
ರಾಜಾಸೀಟ್, ಮಾಂದಲ್‌ಪಟ್ಟಿ, ತಲಕಾವೇರಿ, ಅಬ್ಬಿ ಹಾಗೂ ಇರ್ಫು ಜಲಪಾತ, ರಾಜರ ಗದ್ದುಗೆ, ದುಬಾರೆ, ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿ ನಿಷೇಧಿಸಲಾಗಿದೆ. ಆದೇಶ ಉಲ್ಲಂಘಿಸಿದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.