ಬುಧವಾರ, ಮೇ 18, 2022
28 °C

ಪ್ರೊ ಭಗವಾನ್ ಮೇಲೆ ಮಸಿ ಪ್ರಕರಣ: ವಕೀಲೆ ವಿರುದ್ಧ ಕ್ರಮಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಬೆಂಗಳೂರು: ಪ್ರಕರಣವೊಂದರ ವಿಚಾರಣೆಗೆ ನ್ಯಾಯಾಲಯಕ್ಕೆ ಆಗಮಿಸಿದ್ದ ವಿಚಾರವಾದಿ ಪ್ರೊ. ಭಗವಾನ್ ಮುಖಕ್ಕೆ ಮಸಿ ಬಳಿದಿರುವ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಂಡಾಯ ಸಾಹಿತ್ಯ ಸಂಘಟನೆ, ಕರ್ನಾಟಕ ಒತ್ತಾಯಿಸಿದೆ.

‘ಮೀರಾ ರಾಘವೇಂದ್ರ ಎಂಬ ವಕೀಲೆ ನ್ಯಾಯಾಲಯದ ಆವರಣದಲ್ಲಿ ವಿಚಾರವಾದಿ ಪ್ರೊ ಭಗವಾನ್ ಅವರ ಮುಖಕ್ಕೆ ಮಸಿ ಎರಚಿರುವುದು ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿಸ್ವಾತಂತ್ರ್ಯವಿದೆ. ಆ ಸ್ವಾತಂತ್ರ್ಯವನ್ನು ಉಲ್ಲಂಘಿಸಿದವರಿಗೆ ದಂಡನೆ ನೀಡಲು ನ್ಯಾಯಾಲಯಗಳಿವೆ. ಮಾನ್ಯ ವಕೀಲೆ ತಾವೇ ಭಗವಾನ್ ಮೇಲೆ ದಾವೆ ಹೂಡಿದ್ದಾರೆ. ಅದೇ ನ್ಯಾಯಾಲಯದ ಆವರಣದಲ್ಲಿ ಸಮವಸ್ತ್ರಧಾರಿಯಾಗಿ ಕಾನೂನನ್ನು ಕೈಗೆತ್ತಿಕೊಂಡಂತೆ ಭಗವಾನ್ ಮೇಲೆ ಹಲ್ಲೆನಡೆಸಿರುವುದು ಅನಾಗರಿಕವೂ ಅಪ್ರಜಾಸತ್ತಾತ್ಮಕವೂ ಅಸಂವಿಧಾನಿಕವೂ ಆದ ಹಿಂಸಾಮಾರ್ಗ. ಈ ವಕೀಲೆ ನ್ಯಾಯಾಲಯದಲ್ಲಿ ವಾದ ಮಾಡುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ. ವಕೀಲರ ಸಂಘವು ಈ ವಕೀಲೆಯು ನ್ಯಾಯಾಲಯದಲ್ಲಿ ವಕಾಲತ್ತು ಮಾಡುವ ಮಾನ್ಯತೆಯನ್ನು ರದ್ದುಗೊಳಿಸಿ ಸಂಘದ ಘನತೆ ಗೌರವವನ್ನು ಉಳಿಸಿಕೊಳ್ಳುವ  ಅಗತ್ಯವಿದೆ. ಸರ್ಕಾರವೂ ಈ ವಕೀಲೆಯ ಮೇಲೆ ಕಾನೂನು ಕ್ರಮಗಳನ್ನು ಜರುಗಿಸಬೇಕೆಂದು ಒತ್ತಾಯಿಸುತ್ತೇವೆ’ ಎಂದು ಬಂಡಾಯ ಸಾಹಿತ್ಯ ಸಂಘಟನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: 

ಜತೆಗೆ ವಕೀಲೆಯ ವಾದ ಮಂಡನೆಯ ಸನ್ನದನ್ನು ನ್ಯಾಯಾಲಯವು ರದ್ದುಪಡಿಸಬೇಕೆಂದು ಸಂಘಟನೆ ಒತ್ತಾಯಿಸಿದೆ.

ಸಂಘಟನೆಯ ಹೇಳಿಕೆಗೆ ಡಾ. ಬಂಜಗೆರೆ ಜಯಪ್ರಕಾಶ್, ಡಾ. ಕೆ.  ಮರುಳಸಿದ್ದಪ್ಪ,  ಪ್ರೊ. ಜಿ ಕೆ ಗೋವಿಂದ ರಾವ್, ಪ್ರೊ. ಎಸ್. ಜಿ. ಸಿದ್ಧರಾಮಯ್ಯ, ರುದ್ರಪ್ಪ ಹನಗವಾಡಿ, ಡಾ.  ವಸುಂಧರಾ ಭೂಪತಿ. ಕೆ.  ಷರೀಫ. ಡಾ. ಕಾಳೇಗೌಡ ನಾಗವಾರ, ಡಾ. ಹಿ. ಶಿ. ರಾಮಚಂದ್ರೇಗೌಡ ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು