ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಕ್ತ ದಾಖಲೆ ಹಾಜರುಪಡಿಸಿ, ಪ್ರಯಾಣಿಸಿ: ಪೊಲೀಸ್ ಆಯುಕ್ತರು

Last Updated 13 ಮೇ 2021, 15:22 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಲಸಿಕೆ ಪಡೆಯಲು ತೆರಳುವುದಿದ್ದಲ್ಲಿ ಸೂಕ್ತ ದಾಖಲೆ ಅಗತ್ಯ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಲಸಿಕೆ ಪಡೆಯಲು ಸಂಚರಿಸುತ್ತಿರುವವರ ಬಳಿ ಸೂಕ್ತ ದಾಖಲೆಗಳು ಇದ್ದಲ್ಲಿ ಅನುವು ಮಾಡಿಕೊಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಒಂದು ವೇಳೆ ಪೊಲೀಸ್ ಕೇಳಿದರೆ ಸಾರ್ವಜನಿಕರು ಲಸಿಕೆ ಪಡೆಯುತ್ತಿರುವುದರ ಕುರಿತ SMS/ರಸೀದಿ/ಆನ್‌ಲೈನ್ ದಾಖಲೆ ಮುಂತಾದವನ್ನು ತೋರಿಸತಕ್ಕದ್ದು ಎಂದು ತಿಳಿಸಿದ್ದಾರೆ.

ಜತೆಗೆ ಮನೆಯಲ್ಲೇ ಇರಿ, ಸುರಕ್ಷಿತವಾಗಿ ಇರಿ ಎನ್ನುವ ಕಿವಿಮಾತನ್ನು ಕೂಡ ನಗರ ಪೊಲೀಸ್ ಆಯುಕ್ತರು ಜನತೆಗೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT