ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು– ಮೈಸೂರು ದಶಪಥ ಹೆದ್ದಾರಿ ಟೋಲ್‌ ಸಂಗ್ರಹ ಸರಿಯಲ್ಲ: ಸಿದ್ದರಾಮಯ್ಯ

Last Updated 14 ಮಾರ್ಚ್ 2023, 23:15 IST
ಅಕ್ಷರ ಗಾತ್ರ

ದಾವಣಗೆರೆ: ‘ಬೆಂಗಳೂರು– ಮೈಸೂರು ದಶಪಥ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಸೇವಾ ರಸ್ತೆ ಪೂರ್ಣಗೊಳ್ಳದೇ ಟೋಲ್‌ ಸಂಗ್ರಹಿಸುವಂತಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬೈಪಾಸ್‌ಗಳು ಸಿದ್ಧವಾಗಿಲ್ಲ. ಅಂಡರ್‌ಪಾಸ್‌ ನಿರ್ಮಾಣ ಪೂರ್ಣಗೊಂಡಿಲ್ಲ. ಇನ್ನೂ ಅನೇಕ ಕೆಲಸಗಳು ಬಾಕಿ ಉಳಿದಿವೆ. ಚುನಾವಣೆ ಹತ್ತಿರ ಬಂತೆಂದು ತರಾತುರಿಯಲ್ಲಿ ಪ್ರಧಾನಿಯವರನ್ನು ಕರೆಸಿ ದಶಪಥ ಹೆದ್ದಾರಿ ಉದ್ಘಾಟಿಸಲಾಗಿದೆ’ ಎಂದು ಆರೋಪಿಸಿದರು.

‘ನಮ್ಮ ಯೋಜನೆಯನ್ನು ಅವರು ಉದ್ಘಾಟಿಸಿದ್ದಾರೆ’ ಎಂದು ಟೀಕಿಸಿದರು.

*

ದಶಪಥ ಹೆದ್ದಾರಿ ಟೋಲ್‌ಗೆ ಸಂಬಂಧಿಸಿದಂತೆ ವಿವರವಾಗಿ ವರದಿ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಿದ್ದೇನೆ. ಟೋಲ್ ಆರಂಭವಾದ ಹೊಸತರಲ್ಲಿ ವಿರೋಧ ಸಾಮಾನ್ಯ. ಅವುಗಳನ್ನು ಪರಿಹರಿಸುವೆ.
–ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

*

ಹೆದ್ದಾರಿಯಲ್ಲಿ ಹಲವಾರು ಸಮಸ್ಯೆಗಳಿವೆ. ಎಲ್ಲ ಲೋಪಗಳನ್ನು ಸರಿಪಡಿಸಿ ಟೋಲ್ ಸಂಗ್ರಹಿಸುವುದು ಸೂಕ್ತ. ಜನರ ಮೇಲೆ ಅನಗತ್ಯ ಹೊರೆ ಬೇಡ.
–ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT