ಶನಿವಾರ, ಮೇ 15, 2021
29 °C

ಬೆಂಗಳೂರು ಉತ್ತರ ವಿ.ವಿ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಿಂದ ಮುಂದೂಡಿದ್ದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಏ.19ರಿಂದ ಮತ್ತೆ ಆರಂಭಗೊಳ್ಳಲಿವೆ ಎಂದು ಪ್ರಕಟಣೆ ತಿಳಿಸಿದೆ.

‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದೂಡಿದ್ದ ವಿವಿಧ ಕೋರ್ಸ್‌ಗಳ ಒಂದು, ಮೂರು ಹಾಗೂ ಐದನೇ ಸೆಮಿಸ್ಟರ್‌ನ ಪರೀಕ್ಷೆಗಳನ್ನು ಸೋಮವಾರದಿಂದ (ಏ.19) ನಡೆಸಲು ಇತ್ತೀಚಿನ ಸಭೆಯಲ್ಲಿ ನಿರ್ಧರಿಸಲಾಯಿತು. ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಈಗಾಗಲೇ ಕಾಲೇಜುಗಳ ಪ್ರಾಂಶುಪಾಲರಿಗೆ ರವಾನಿಸಲಾಗಿದೆ’.

‘ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವೆಬ್‌ಸೈಟ್‌ www.bnu.ac.in ಹಾಗೂ ಕಾಲೇಜುಗಳ ವೆಬ್‌ಸೈಟ್‌ಗಳಿಂದಲೂ ವೇಳಾಪಟ್ಟಿ ಪಡೆಯಬಹುದು’ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.