ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ, ನಿಂದಿಸಿದವರ ಮೇಲೆ ಕ್ರಮ ಜರುಗಿಸಿ: ಖಾದರ್

Last Updated 12 ಆಗಸ್ಟ್ 2020, 7:50 IST
ಅಕ್ಷರ ಗಾತ್ರ

ಮಂಗಳೂರು: ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ. ಹಾಗೆಂದು ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ. ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ನಡೆದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಅವರು ಟ್ವೀಟ್ ಮಾಡಿದ್ದಾರೆ.

ಲೋಕಕ್ಕೆ ಸೌಹಾರ್ದತೆ, ಸಮಾನತೆ ಹಾಗೂ ಮಾನವೀಯತೆ ಸಾರಿದ ವಿಶ್ವ ಪ್ರವಾದಿ ಮೊಹಮ್ಮದ್ (ಸ.ಅ) ರವರನ್ನು ನಿಂದನೆ ಮಾಡಿದವರ ವಿರುದ್ದ ಗರಿಷ್ಠ ಕ್ರಮ ಕೈಗೊಳ್ಳಲೇಬೇಕು. ಆದರೆ ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡುವುದನ್ನ ಒಪ್ಪುವುದು ಸಾಧ್ಯವೇ ಇಲ್ಲ. ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ. ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ. ಎಲ್ಲರೂ ಶಾಂತಿ ಕಾಪಾಡಿ, ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಪೊಲೀಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT