ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಜೆ.ಹಳ್ಳಿ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಬಿಎಸ್‌ವೈ ಆದೇಶ

Last Updated 12 ಆಗಸ್ಟ್ 2020, 7:24 IST
ಅಕ್ಷರ ಗಾತ್ರ

ಬೆಂಗಳೂರು: ಡಿ.ಜೆ.ಹಳ್ಳಿಯಲ್ಲಿ ಗಲಭೆ ಸೃಷ್ಟಿಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಅವರು,'ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೋಲೀಸ್ ಠಾಣೆ ಮೇಲೆ ದಾಳಿ‌, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ' ಎಂದು ಹೇಳಿದ್ದಾರೆ.

'ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕು' ಎಂದು ಬಿಎಸ್‌ವೈ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT