ಬಾಂಗ್ಲಾ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರ ಕಳುಹಿಸುತ್ತೇನೆ: ಸಿಎಂ

ಶಿಕಾರಿಪುರ: ಬಾಂಗ್ಲಾ ಅಕ್ರಮ ವಲಸಿಗರನ್ನು ಗುರುತಿಸಿ ರಾಜ್ಯದಿಂದ ಹೊರಗೆ ಕಳುಹಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ಬಾಂಗ್ಲಾ ನಿವಾಸಿಗಳನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳು ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ನಿವೇಶನ ರಹಿತರಿಗೆ ಎರಡು ವರ್ಷದ ಅಧಿಕಾರವಧಿಯಲ್ಲಿ ನಿವೇಶನ ಹಂಚಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಪ್ರಸ್ತುತ ಲಾಕ್ ಡೌನ್ ಮುಂದುವರೆಸಿರುವ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆಯಾದರೆ ಲಾಕ್ ಡೌನ್ ತೆರವುಗೊಳಿಸುತ್ತೇವೆ ಎಂದರು.
ಸಂಸದ ಬಿ.ವೈ. ರಾಘವೇಂದ್ರ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಅರಗ ಜ್ಞಾನೇಂದ್ರ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.