ಸೋಮವಾರ, ಆಗಸ್ಟ್ 2, 2021
23 °C

ಬೆಂಗಳೂರಿನಲ್ಲೊಂದು ನಿರ್ಭಯ ನೆನಪಿಸುವ ಅತ್ಯಾಚಾರ: ಆರೋಪಿಗಳ ಕಾಲಿಗೆ ಗುಂಡೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯುವತಿ‌ ಜೊತೆ‌ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಬಾಂಗ್ಲಾದೇಶದ 23 ವರ್ಷದ ಯುವತಿಯನ್ನು ರಾಮಮೂರ್ತಿನಗರದ ಮನೆಯೊಂದರಲ್ಲಿ ಕೆಲ‌ ದಿನ ಹಿಂದೆ ಆರೋಪಿಗಳು ಅತ್ಯಾಚಾರ ಎಸಗಿದ್ದರು. ಅದರ ವಿಡಿಯೊವನ್ನು ಆರೋಪಿಗಳೇ ಚಿತ್ರೀಕರಿಸಿ ಸಾಮಾಜಿಕ‌ ಜಾಲತಾಣಗಳಲ್ಲಿ‌ ಹರಿಬಿಟ್ಟಿದ್ದರು.

ವಿಡಿಯೊ ಆಧರಿಸಿ‌ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ನಗರದ ಪೊಲೀಸರು, ನಾಲ್ವರು ಆರೋಪಗಳನ್ನು ಗುರುವಾರ ಸಂಜೆ ಬಂಧಿಸಿದ್ದರು.

ಇದನ್ನೂ ಓದಿ: 

ಸ್ಥಳ ಮಹಜರು‌ ಮಾಡಲು ಆರೋಪಿಗಳನ್ನು ಶುಕ್ರವಾರ ಬೆಳಿಗ್ಗೆ ಕರೆದೊಯ್ಯಲಾಗಿತ್ತು. ಆಗ ಕೆ. ಚನ್ನಸಂದ್ರದ ಕನಕ‌ ನಗರದಲ್ಲಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳು, ಪೊಲೀಸರ ಮೇಲೆ‌ ಹಲ್ಲೆ‌ ಮಾಡಲು‌ ಮುಂದಾಗಿದ್ದರು.

ಅದೇ ವೇಳೆಯೇ ಪೊಲೀಸರು, ಆರೋಪಿಗಳಾದ ರಿದಾಯ್ ಹಾಗೂ‌‌ ಸಾಗರ್ ಕಾಲಿಗೆ ಗುಂಡು ಹಾರಿಸಿದ್ದಾರೆ. 
ಗಾಯಗೊಂಡ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು