ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಬಾಣಿ ಭಾಷೆ, ಸಂಸ್ಕೃತಿಯ ಅಭಿವೃದ್ಧಿಗೆ ಅಕಾಡೆಮಿ: ಲಿಂಬಾವಳಿ

Last Updated 15 ಫೆಬ್ರುವರಿ 2021, 21:51 IST
ಅಕ್ಷರ ಗಾತ್ರ

ಬೆಂಗಳೂರು: ‘ಲಂಬಾಣಿ ಸಾಹಿತ್ಯ, ಸಂಸ್ಕೃತಿ ಮತ್ತು ಭಾಷೆಯನ್ನು ಸಂರಕ್ಷಿಸಿ ಪ್ರಚುರಪಡಿಸುವ ಉದ್ದೇಶದಿಂದ ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸ್ಥಾಪಿಸಿ ಆದೇಶ ಹೊರಡಿಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಸಂತ ಶ್ರೀ ಸೇವಾಲಾಲ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬೆಂಗಳೂರಿನಲ್ಲಿರುವ ತಾಂಡಾ ಅಭಿವೃದ್ಧಿ ನಿಗಮದ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಅಕಾಡೆಮಿಯ ಪ್ರಧಾನ ಕಚೇರಿ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಕೊಪ್ಪಳದ ಬಹದ್ದೂರ್‌ ಬಂಡೆ ಪ್ರದೇಶದಲ್ಲಿರುವ ಬಂಜಾರ ಭವನದಲ್ಲಿ ಶಾಖಾ ಕಚೇರಿ ಸ್ಥಾಪಿಸಲು ಉದ್ದೇಶಿಸಲಾಗಿದೆ’ ಎಂದು ಅವರುತಿಳಿಸಿದರು.

‘ಬಜೆಟ್‌ನಲ್ಲಿ ಇತರ ಭಾಷಾ ಅಕಾಡೆಮಿಗಳಿಗೆ ನೀಡಿದಂತೆ ಲಂಬಾಣಿ ಸಂಸ್ಕೃತಿ ಮತ್ತು ಭಾಷಾ ಅಭಿವೃದ್ಧಿ ಅಕಾಡೆಮಿಗೂ ಹೆಚ್ಚಿನ ಅನುದಾನ ಒದಗಿಸಲಾಗುವುದು. ಶೀಘ್ರದಲ್ಲೇ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲಾಗುತ್ತದೆ’ ಎಂದೂ ಅವರು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT