ಶನಿವಾರ, ಆಗಸ್ಟ್ 13, 2022
24 °C

ಬ್ಯಾಂಕ್‌ ನೋಟಿಸ್‌: ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಿಕ್ಕೇರಿ (ಮಂಡ್ಯ): ಸಮೀಪದ ಐಕನಹಳ್ಳಿ ಗ್ರಾಮದ ರೈತ ಅಣ್ಣೇಗೌಡ (58), ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್‌ನಿಂದ ಬಂದಿದ್ದ ನೋಟಿಸ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಾಸಲು ಗ್ರಾಮದ ಬ್ಯಾಂಕ್‌ ಆಫ್‌ ಬರೋಡದಲ್ಲಿ (ವಿಜಯಾ ಬ್ಯಾಂಕ್‌) ₹ 1 ಲಕ್ಷ,  ಆನೆಗೊಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 50 ಸಾವಿರ ಸಾಲವಿತ್ತು. ಖಾಸಗಿ ವ್ಯಕ್ತಿಗಳಿಂದಲೂ ಸಾಲ ಪಡೆದು ನಾಲ್ಕೈದು ಕೊಳವೆಬಾವಿ ತೋಡಿಸಿದ್ದರು. ಬಾವಿಯಲ್ಲಿ ನೀರು ಬಾರದ ಕಾರಣ ಬಹಳ ನೊಂದಿದ್ದರು ಎನ್ನಲಾಗಿದೆ.

ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಹಾಗೂ ಶುಂಠಿ ಬೆಳೆ ನೀರಿಲ್ಲದೆ ಒಣಗಿತ್ತು. ಸಾಲದ ಹೊರೆ ಜಾಸ್ತಿಯಾಗಿ ಸಾಲಗಾರರ ಕಾಟ ಹೆಚ್ಚಾಗಿತ್ತು. ಜೊತೆಗೆ, ಸಾಲ ತೀರಿಸುವಂತೆ ಬ್ಯಾಂಕ್‌ನಿಂದ ನೋಟಿಸ್ ಬಂದ ಕಾರಣ ಭಯದಿಂದ ಎರಡು ದಿನಗಳ ಹಿಂದೆ ಮನೆಬಿಟ್ಟು ಹೋಗಿದ್ದರು. ಪತ್ನಿ ಸುವರ್ಣಾ, ಈ ಕುರಿತು ಕಿಕ್ಕೇರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆದರೆ, ಅಣ್ಣೇಗೌಡ ಅವರು ಬುಧವಾರ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಒದ್ದಾಡುತ್ತಿದ್ದರು. ಅಸ್ವಸ್ಥಗೊಂಡಿದ್ದ  ಅವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಿಕ್ಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು