ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿರೀಶ್ ಕಾಸರವಳ್ಳಿ, ಸಾರಾ ಅಬೂಬಕರ್ ಸೇರಿ ನಾಲ್ವರಿಗೆ ‘ಬರಗೂರು ಪ್ರಶಸ್ತಿ’

Last Updated 18 ಅಕ್ಟೋಬರ್ 2021, 10:43 IST
ಅಕ್ಷರ ಗಾತ್ರ

ಬೆಂಗಳೂರು: ಗಿರೀಶ್‌ ಕಾಸರವಳ್ಳಿ, ಸಾರಾ ಅಬೂಬಕರ್‌, ಬಿ.ಕೆ.ಸುಮಿತ್ರ ಹಾಗೂ ಚಂದ್ರಕಾಂತ ಪೋಕಳೆ ಅವರು ನಾಡೋಜ ಡಾ.ಬರಗೂರು ಪ್ರತಿಷ್ಠಾನ ನೀಡುವ ‘ಬರಗೂರು ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಾನವು ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ತಲಾ ಒಬ್ಬರಿಗೆ ‍ಪ್ರತಿವರ್ಷವೂ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ತಲಾ ₹25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿರುತ್ತದೆ.

ಸಿನಿಮಾ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಕಾಸರವಳ್ಳಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾರಾ ಅವರಿಗೆ 2020ನೇ ಸಾಲಿನ ಪ್ರಶಸ್ತಿ ದೊರೆತಿದೆ.

ಹಿನ್ನೆಲೆ ಗಾಯಕಿಯಾಗಿ ಹೆಸರು ಗಳಿಸಿರುವ ಹಾಗೂ ಸುಗಮ ಸಂಗೀತ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ಬಿ.ಕೆ.ಸುಮಿತ್ರ ಮತ್ತು ಮರಾಠಿಯಿಂದ ಕನ್ನಡಕ್ಕೆ 40ಕ್ಕೂ ಹೆಚ್ಚು ಕೃತಿಗಳನ್ನು ಅನುವಾದಿಸಿರುವ ಚಂದ್ರಕಾಂತ ಅವರಿಗೆ 2021ನೇ ಸಾಲಿನ ಪ್ರಶಸ್ತಿ ಒಲಿದಿದೆ.

ಇದೇ 30ರಂದು ನಗರದಲ್ಲಿ‍ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT