ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಾ, ಗಜಾನನ ಶರ್ಮಾ ಸೇರಿ ನಾಲ್ವರಿಗೆ ಪ್ರಶಸ್ತಿ

Last Updated 2 ಜುಲೈ 2022, 19:30 IST
ಅಕ್ಷರ ಗಾತ್ರ

‌ಬೆಂಗಳೂರು: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘವು 2021ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ವಿಜಯಾ,ಗಜಾನನ ಶರ್ಮಾ ಸೇರಿ ನಾಲ್ವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

‘ಸಾಹಿತ್ಯ ರತ್ನ ಪ್ರಶಸ್ತಿ’ಗೆ ಗಜಾನನ ಶರ್ಮಾ ಅವರ ‘ಚನ್ನಬೈರಾದೇವಿ’, ‘ಯುವ ಸಾಹಿತ್ಯ ರತ್ನ ಪ್ರಶಸ್ತಿ’ಗೆ ಶರಣು ಹುಲ್ಲೂರು ಅವರ ‘ಅನಂತವಾಗಿರು’ ಕೃತಿ ಆಯ್ಕೆಯಾಗಿದೆ.

‘ಪುಸ್ತಕ ರತ್ನ ಪ್ರಶಸ್ತಿ’ಗೆ ಜಮೀಲ್ ಸಾವಣ್ಣ ಅವರ ‘ಸಾವಣ್ಣ ಪ್ರಕಾಶನ’, ‘ಮುದ್ರಣ ರತ್ನ ಪ್ರಶಸ್ತಿ’ಗೆ ಲೇಖಕಿ ವಿಜಯಾ ಅವರ ‘ಇಳಾ ಗ್ರಾಫಿಕ್ಸ್’ ಆಯ್ಕೆಯಾಗಿದೆ.ಈ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಒಳಗೊಂಡಿವೆ.

‘ಪುಸ್ತಕ ಸಂಸ್ಕೃತಿಗೆ ಪೂರಕವಾಗಿ ಬರಹಗಾರರು, ಪ್ರಕಾಶಕರು ಹಾಗೂ ಮುದ್ರಕರನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದೇವೆ. 2021ನೇ ಸಾಲಿನ ಪ್ರಶಸ್ತಿಗಳನ್ನು ಜುಲೈ 30ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ’ ಎಂದು ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಹಾಗೂ ಕಾರ್ಯದರ್ಶಿ ಆರ್. ದೊಡ್ಡೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT