ರಾಜ್ಯದ 4 ಕಡೆಗಳಿಂದ ಬೆಂಗಳೂರಿಗೆ ಜಾಥಾ; ಮಾ.15, 16ಕ್ಕೆ ರೈತ ಸಮಾವೇಶ
ಬಸವಕಲ್ಯಾಣ: ಜನಾಂದೋಲನ ಮಹಾಮೈತ್ರಿ ಜಾಥಾ ಆರಂಭ

ಬಸವಕಲ್ಯಾಣ: ಇಲ್ಲಿನ ಅನುಭವ ಮಂಟಪದ ಆವರಣದಿಂದ ಜನಾಂದೋಲನ ಮಹಾಮೈತ್ರಿಯ ಜಾಥಾ ಮಂಗಳವಾರ ಆರಂಭವಾಗಿದ್ದು, ಬೆಂಗಳೂರಿಗೆ ಪ್ರಯಾಣ ಬೆಳೆಸಿತು.
ಹೋರಾಟಗಾರ ಎಸ್.ಆರ್.ಹಿರೇಮಠ ಅವರು ಜಾಥಾದ ವಾಹನಕ್ಕೆ ಹಸಿರು ಶಾಲು ತೋರಿಸಿ ಚಾಲನೆ ನೀಡಿ, ‘ಮೂರು ಕರಾಳ ಕೃಷಿ ಕಾನೂನುಗಳನ್ನು ರಾಜ್ಯ ಸರ್ಕಾರ ಶೀಘ್ರ ಹಿಂದಕ್ಕೆ ಪಡೆಯಬೇಕು. ಶಾಸನಾತ್ಮಕ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು’ ಎಂದು ಆಗ್ರಹಿಸಿದರು.
ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ರಾಜ್ಯದ ನಾಲ್ಕು ಕಡೆಗಳಿಂದ ಜಾಥಾ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ಮುಕ್ತಾಯವಾಗಲಿದೆ. ಅಲ್ಲಿ ಇದೇ 15 ಮತ್ತು 16ರಂದು ನಡೆಯುವ ರೈತ ಸಮಾವೇಶದಲ್ಲಿ ರೈತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.