ಭಾನುವಾರ, ಜನವರಿ 24, 2021
17 °C

ನನ್ನ ಕರೆನ್ಸಿ ಖಾಲಿ, ಯಾರ ಕರೆಯೂ ಬಂದಿಲ್ಲ: ಬಸನಗೌಡ ಪಾಟೀಲ ಯತ್ನಾಳ ನಿರಾಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ‘ನನ್ನ ಮೊಬೈಲ್ ಫೋನ್‌‌ ಕರೆನ್ಸಿ ಖಾಲಿಯಾಗಿದೆ, ಯಾರ ಕರೆಯೂ ಬಂದಿಲ್ಲ’ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಖ್ಯಮಂತ್ರಿಯಿಂದ ಕರೆ ಬಂದಿಲ್ಲ, ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತಿಲ್ಲ ಎಂದು ಪರೋಕ್ಷವಾಗಿ ನಿರಾಸೆ ವ್ಯಕ್ತಪಡಿಸಿದರು. 

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಿಮಗೆ ಮುಖ್ಯಮಂತ್ರಿಯಿಂದ ಕರೆ ಬಂದಿದೆಯಾ? ಬೆಂಗಳೂರಿಗೆ ಹೋಗುತ್ತಿದ್ದೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ‘ಬೆಂಗಳೂರಿನಲ್ಲಿ ನನಗೇನೂ ಕೆಲಸ ಇಲ್ಲ, ಅಲ್ಲಿಗೆ ನಾನು ಹೋಗುತ್ತಿಲ್ಲ’ ಎಂದು ಹೇಳಿದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು