ಭಾನುವಾರ, ಜುಲೈ 3, 2022
24 °C

ಬಸವ ಕಲ್ಯಾಣ ಉಪ ಚುನಾವಣೆ: ವಿಜಯೇಂದ್ರ ಹೆಸರು ಪ್ರಸ್ತಾಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಬಸವಕಲ್ಯಾಣ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಗ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಬಿಜೆಪಿ ಪ್ರಮಖರ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗಿದೆ.

ಕಾಂಗ್ರೆಸ್ ತೆಕ್ಕೆಯಲ್ಲಿದ್ದ ಬಸವ ಕಲ್ಯಾಣ ಕ್ಷೇತ್ರವನ್ನು ಬಿಜೆಪಿ ವಶಕ್ಕೆ ಪಡೆಯಬೇಕಾದರೆ ಈ ಆಯ್ಕೆ ಸೂಕ್ತ ಎಂದು ಕೆಲವು ಸದಸ್ಯರು ಸಲಹೆ ನೀಡಿದರು. ಮರಾಠಾ ನಿ‌ಗಮ‌ ರಚನೆಯಿಂದ ಮರಾಠಾ ಸಮುದಾಯ ಮತ ಸೆಳೆಯಲು ಸಾಧ್ಯ. ಹಾಗೆಯೇ, ನಿರ್ಣಾಯಕವಾಗಿರುವ ಲಿಂಗಾಯತ ಮತ ಅನಾಯಾಸವಾಗಿ ದಕ್ಕುವುದರಿಂದ ವಿಜಯೇಂದ್ರ ಸ್ಪರ್ಧಿಸಿದರೆ ಒಳಿತು ಎಂಬ ಅಭಿಪ್ರಾಯ ಮೂಡಿತು. ಅಂತಿಮ ತೀರ್ಮಾನವನ್ನು ವರಿಷ್ಠರಿಗೆ ಬಿಡಲು ನಿರ್ಧರಿಲಾಯಿತು ಎಂದು ಮೂಲಗಳು ತಿಳಿಸಿವೆ.

ಶ್ರದ್ಧಾ ಶೆಟ್ಟರ್‌?
ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ದಿವಂಗತ ಸಂಸದ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಅಥವಾ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ನಡೆದಿದೆ. ಇನ್ನೂ ಕೆಲವು ಹೆಸರುಗಳು ಪ್ರಸ್ತಾಪವಾಗಿದ್ದು, ಇನ್ನೆರಡು ದಿನದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ವರಿಷ್ಠರಿಗೆ ಶಿಫಾರಸು ಮಾಡಲು ಪ್ರಮುಖರ ಸಮಿತಿ ಸಭೆ ನಿರ್ಣಯ ಕೈಗೊಂಡಿದೆ ಎಂದು ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು