ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್‌ ಶಾಗೆ ಬೆಳ್ಳಿ ತಟ್ಟೆಯಲ್ಲಿ ಹೋಳಿಗೆ ಊಟ: ಸಿಎಂ ಬೊಮ್ಮಾಯಿ ಸಾಥ್

Last Updated 3 ಮೇ 2022, 10:51 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು,ಮಂಗಳವಾರ ಮಧ್ಯಾಹ್ನಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯೋಜಿಸಿದ್ದ ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಆದರೆ, ಆ ಬಳಿಕ ನಡೆಯಬೇಕಿದ್ದ ಪಕ್ಷದ ಪದಾಧಿಕಾರಿಗಳ ಸಭೆಯನ್ನು ರದ್ದುಗೊಳಿಸಿ ಶಾ ಅವರು ಜಿಂದಾಲ್‌ಗೆ ತೆರಳಿದರು.

ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಪ್ರಯುಕ್ತ ಹೋಳಿಗೆ ಊಟ ಏರ್ಪಡಿಸಲಾಗಿತ್ತು. ಶಾ ಅವರ ಜತೆ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಬಿ.ಎಸ್‌.ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರು ಒಟ್ಟಿಗೆ ಕುಳಿತು ಮಾತನಾಡುತ್ತಾ ಬೆಳ್ಳಿ ತಟ್ಟೆಯಲ್ಲಿ ಭೋಜನ ಸೇವಿಸಿದರು.

ಭೋಜನ ಕೂಟಕ್ಕೆ ಎಲ್ಲ ಶಾಸಕರು ಮತ್ತು ಸಂಸದರಿಗೂ ಆಹ್ವಾನ ನೀಡಿದ್ದರೂ ಬೆಂಗಳೂರಿನಲ್ಲಿ ಇದ್ದವರು ಮಾತ್ರ ಹಾಜರಿದ್ದರು. ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಬಿ.ಸಿ.ನಾಗೇಶ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಜಿ.ಎಂ.ಸಿದ್ದೇಶ್‌, ಜಿ.ಎಸ್‌.ಬಸವರಾಜ್‌, ಡಿ.ವಿ.ಸದಾನಂದಗೌಡ, ಶಾಸಕರಾದ ಅಶ್ವತ್ಥನಾರಾಯಣ, ರಾಜಕುಮಾರ್‌ ಪಾಟೀಲ ತೆಲ್ಕೂರ್‌, ಸುರೇಶ್‌ ಕುಮಾರ್‌, ರವಿಸುಬ್ರಹ್ಮಣ್ಯ, ಎಂ.ಪಿ.ರೇಣುಕಾಚಾರ್ಯ, ಕುಮಾರ್ ಬಂಗಾರಪ್ಪ, ಎಸ್‌.ಆರ್‌.ವಿಶ್ವನಾಥ್, ವಿಧಾನಪರಿಷತ್‌ ಸದಸ್ಯರ ಎನ್‌.ರವಿಕುಮಾರ್‌, ಸಿ.ಪಿ.ಯೋಗೇಶ್ವರ್, ರೂಪಾಲಿ ನಾಯ್ಕ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಂತಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT