ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂಬ ವಿರೋಧ ಪಕ್ಷಗಳ ಆಗ್ರಹವನ್ನು ತಳ್ಳಿಹಾಕಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ‘ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ವಾಸ್ತವ ಅಂಶವನ್ನು ತಿಳಿಸಿದ್ದಾರೆ. ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆಯ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಟೆಂಡರ್‌ಗೆ ಯಾವ ಪದ್ಧತಿಗಳನ್ನು ಅನುಸರಿಸಲಾಗುತ್ತಿತ್ತೊ ಈಗಲೂ ಅದೇ ಪ್ರಕಾರ ನಡೆಯುತ್ತಿದೆ. ಕೆಟಿಟಿಪಿ ಕಾಯ್ದೆ ಪ್ರಕಾರವೇ ಟೆಂಡರ್ ಪ್ರಕ್ರಿಯೆ ನಡೆದಿದೆ. ಎಲ್ಲವೂ ಪಾರದರ್ಶಕವಾಗಿದೆ. ವಿರೋಧ ಪಕ್ಷಗಳು ಆರೋಪ ಮಾಡುವುದು ಸಹಜ’ ಎಂದು ತಿರುಗೇಟು ನೀಡಿದರು.

‘ದೂರವಾಣಿ ಕರೆ ಕದ್ದಾಲಿಕೆ ಆಗುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪದ ಪ್ರಕರಣವನ್ನು ತನಿಖೆಗೆ ವಹಿಸಲಾಗಿದೆ. ಬೆಲ್ಲದ್ ಜೊತೆ ತನಿಖಾಧಿಕಾರಿ ಚರ್ಚಿಸಿ ಮಾಹಿತಿ ಪಡೆದಿದ್ದಾರೆ’ ಎಂದರು.

ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿಯ ಟೆಂಡರ್‌ನಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಆಗ್ರಹಿಸಿದೆ.

ಇದನ್ನೂ ಓದಿ... ವಿಶ್ವನಾಥ್ ಆರೋಪದ ಬಗ್ಗೆ ತನಿಖೆಗೆ ಜಂಟಿ ಸದನ ಸಮಿತಿ ರಚಿಸಲಿ: ಡಿ.ಕೆ. ಶಿವಕುಮಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.