ಹಾನಗಲ್ ಮತದಾರರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಹಾನಗಲ್ ಮತದಾರರ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಅವರು, ' ಹಾನಗಲ್ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲವು ಸಾಧಿಸಿದ ಶ್ರೀನಿವಾಸ ಮಾನೆ ಅವರಿಗೆ ಅಭಿನಂದನೆಗಳು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸೋಲುಗೆಲುವು ಸಹಜವಾಗಿದೆ. ಹಾನಗಲ್ ಮತದಾರರ ಈ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ. ಹಾನಗಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ಸಹಕಾರವನ್ನು ಮುಂದುವರೆಸುವುದಾಗಿ ತಿಳಿಸುತ್ತೇನೆ' ಎಂದು ಹೇಳಿದ್ದಾರೆ.
'ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನಮ್ಮ ಪಕ್ಷದ ಅಭ್ಯರ್ಥಿಯಾದ ಶ್ರೀ ರಮೇಶ ಭೂಸನೂರ ಅವರಿಗೆ ಹಾಗೂ ಅವರ ಗೆಲುವಿಗೆ ಶ್ರಮಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹೃತ್ಪೂರ್ವಕ ಅಭಿನಂದನೆಗಳು' ಎಂದೂ ಬೊಮ್ಮಾಯಿ ಟ್ವೀಟಿಸಿದ್ದಾರೆ.
ಹಾನಗಲ್ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲವು ಸಾಧಿಸಿದ ಶ್ರೀನಿವಾಸ ಮಾನೆ ಅವರಿಗೆ ಅಭಿನಂದನೆಗಳು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸೋಲುಗೆಲುವು ಸಹಜವಾಗಿದ್ದು ಹಾನಗಲ್ ಮತದಾರದ ಈ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ. ಹಾನಗಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ಸಹಕಾರವನ್ನು ಮುಂದುವರೆಸುವುದಾಗಿ ತಿಳಿಸುತ್ತೇನೆ.
— Basavaraj S Bommai (@BSBommai) November 2, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.