ಭಾನುವಾರ, ಸೆಪ್ಟೆಂಬರ್ 26, 2021
23 °C

ಬಸವರಾಜ ಬೊಮ್ಮಾಯಿ ಬುದ್ಧಿವಂತ ರಾಜಕಾರಣಿ: ಸಿ.ಟಿ.ರವಿ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುದ್ಧಿವಂತ ರಾಜಕಾರಣಿ. ಅವರಿಗೆ ರಾಜಕಾರಣ ಮತ್ತು ಆಡಳಿತ, ಎರಡೂ ಚೆನ್ನಾಗಿ ಗೊತ್ತಿದೆ’ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಣಜಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ. ಅವರ ನೇತೃತ್ವದಲ್ಲಿ ಜನರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಆಗುತ್ತಿದೆ. ಅಧಿಕಾರ ವಹಿಸಿಕೊಂಡ ಆರಂಭದ ದಿನಗಳಲ್ಲೇ ಅವರು ಆಡಳಿತದಲ್ಲಿ ಉತ್ತಮ ವಾತಾವರಣ ಕಾಣುವಂತೆ ಮಾಡುತ್ತಿದ್ದಾರೆ. ಇದರಿಂದಾಗಿ ರಾಜ್ಯ ಬಿ.ಜೆ.ಪಿ.ಯಲ್ಲಿ ಅತೃಪ್ತಿಯ ಪ್ರಶ್ನೆಯೇ ಬರುವುದಿಲ್ಲ. ಮುಂಬರುವ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಬಿ.ಜೆ.ಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಕರ್ನಾಟಕ ಬಿಜೆಪಿಯಲ್ಲಿ ಹಿರಿಯ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಸ್ವಾಭಾವಿಕವಾಗಿ ಸಚಿವ ಸ್ಥಾನದ ಆಕಾಂಕ್ಷೆ ಹೊಂದಿದ್ದಾರೆ. ಅವರಲ್ಲಿ ಹಲವರು ಅರ್ಹರೂ ಇದ್ದಾರೆ. ಕೆಲವರಿಗೆ ಮಂತ್ರಿ ಸ್ಥಾನ ಲಭಿಸಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು