ಮಂಗಳವಾರ, ಸೆಪ್ಟೆಂಬರ್ 28, 2021
23 °C

ಸಚಿವ ಸಂಪುಟದಲ್ಲಿ ವಲಸಿಗರದ್ದೇ ಪ್ರಾಬಲ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ, ಪಕ್ಷದ ಮೂಲ ಕಾರ್ಯಕರ್ತರಾಗಿ ಬೆಳೆದು ಬಂದವರಿಗಿಂತಲೂ ಹೊರಗಿನಿಂದ ಬಂದ ‘ವಲಸಿಗ’ರೇ ಹೆಚ್ಚಿನ ಸಂಖ್ಯೆಯಲ್ಲಿ ಸಚಿವ ಸ್ಥಾನ ಪಡೆದಿದ್ದಾರೆ. ಮುಖ್ಯಮಂತ್ರಿಯೂ ಸೇರಿದಂತೆ 16 ಮಂದಿ ವಲಸಿಗರಿದ್ದಾರೆ!

ಮೂಲದಿಂದ ಬಿಜೆಪಿಯಲ್ಲೇ ಬೆಳೆದಿರುವ ಕೆ.ಎಸ್‌.ಈಶ್ವರಪ್ಪ, ಆರ್‌. ಅಶೋಕ, ಎಸ್‌. ಅಂಗಾರ, ಆರಗ ಜ್ಞಾನೇಂದ್ರ, ಡಾ.ಸಿ.ಎನ್‌. ಅಶ್ವತ್ಥನಾರಾಯಣ ಸಿ.ಸಿ. ಪಾಟೀಲ, ಕೋಟ ಶ್ರೀನಿವಾಸ ಪೂಜಾರಿ, ಪ್ರಭು ಚವ್ಹಾಣ್‌, ಮುರುಗೇಶ್ ಆರ್‌. ನಿರಾಣಿ, ಶಶಿಕಲಾ ಜೊಲ್ಲೆ, ಬಿ.ಸಿ. ನಾಗೇಶ್‌, ವಿ. ಸುನೀಲ್‌ ಕುಮಾರ್‌, ಹಾಲಪ್ಪ ಆಚಾರ್‌ ಮತ್ತು ಶಂಕರ ಪಾಟೀಲ್‌ ಮುನೇನಕೊಪ್ಪ ಅವರಿಗೆ ಸಂಪುಟದಲ್ಲಿ ಅವಕಾಶ ದೊರಕಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ವಿ. ಸೋಮಣ್ಣ, ಉಮೇಶ್ ಕತ್ತಿ ದಶಕದ ಹಿಂದೆ ಜನತಾಪರಿವಾರದಿಂದ ಬಿಜೆಪಿಗೆ ಬಂದವರು. ಜೆ.ಸಿ. ಮಾಧುಸ್ವಾಮಿ ಕೆಲವು ವರ್ಷಗಳ ಈಚೆಗಷ್ಟೇ ಬಿಜೆಪಿ ಸೇರಿದವರು. ಬಿ. ಶ್ರೀರಾಮುಲು ಮತ್ತು ಆನಂದ್‌ ಸಿಂಗ್‌ ಮೂಲದಲ್ಲಿ ಬಿಜೆಪಿಯವರೇ ಆದರೂ, ಒಮ್ಮೆ ಪಕ್ಷದಿಂದ ಹೊರಹೋಗಿ ಮತ್ತೆ ವಾಪಸ್‌ ಬಂದಿರುವವರು.

ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌, ಬಿ.ಸಿ. ಪಾಟೀಲ, ಬೈರತಿ ಬಸವರಾಜ, ಡಾ.ಕೆ. ಸುಧಾಕರ್‌, ಕೆ. ಗೋಪಾಲಯ್ಯ, ಎಂ.ಟಿ.ಬಿ. ನಾಗರಾಜು, ಕೆ.ಸಿ. ನಾರಾಯಣ ಗೌಡ ಮತ್ತು ಮುನಿರತ್ನ 2019ರಲ್ಲಿ ‘ಆಪರೇಷನ್‌ ಕಮಲ’ದ ಮೂಲಕ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ತೊರೆದು ಬಿಜೆಪಿ ಸೇರಿದವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು