ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಸಚಿವ ಸಂಪುಟದಲ್ಲಿ ಜಾತಿವಾರು ಪ್ರಾತಿನಿಧ್ಯ

Last Updated 4 ಆಗಸ್ಟ್ 2021, 19:44 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ 30 ಸದಸ್ಯರಿದ್ದಾರೆ. ಈ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಮಂದಿ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದವರು. ಈ ಎರಡೂ ಸಮುದಾಯಗಳಿಗೆ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ದೊರಕಿದೆ.

ಮುಖ್ಯಮಂತ್ರಿಯೂ ಸೇರಿದಂತೆ ಲಿಂಗಾಯತ ಸಮುದಾಯದ ಹತ್ತು ಜನರು ಸಂಪುಟದಲ್ಲಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯದ ಮೂವರು, ವೀರಶೈವ ಸಾದರ ಲಿಂಗಾಯತ ಸಮುದಾಯದ ಇಬ್ಬರು, ವೀರಶೈವ ಲಿಂಗಾಯತರ ಬಣಜಿಗ ಮತ್ತು ಚತುರ್ಥ ಉಪ ಪಂಗಡಗಳ ತಲಾ ಒಬ್ಬರು, ಗೌಡ ಲಿಂಗಾಯತ, ನೊಳಂಬ, ರಡ್ಡಿ ಲಿಂಗಾಯತ ಉಪ ಪಂಗಡಗಳ ತಲಾ ಒಬ್ಬರು ಸಂಪುಟದಲ್ಲಿದ್ದಾರೆ.

ಒಕ್ಕಲಿಗ ಸಮುದಾಯದ ಏಳು ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಗಂಗಟಕಾರ ಒಕ್ಕಲಿಗ ಉಪ ಪಂಗಡದ ನಾಲ್ವರು, ಮರಸು ಒಕ್ಕಲಿಗ, ರೆಡ್ಡಿ ಒಕ್ಕಲಿಗ ಮತ್ತು ನಾಮಧಾರಿ ಒಕ್ಕಲಿಗ ಉಪ ಪಂಗಡಗಳ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಪರಿಶಿಷ್ಟ ಜಾತಿಯ ಎಡಗೈ, ಮೊಗೇರ ಮತ್ತು ಲಂಬಾಣಿ ಸಮುದಾಯದ ತಲಾ ಒಬ್ಬರು ಹಾಗೂ ಪರಿಶಿಷ್ಟ ಪಂಗಡಗಳ ಕೋಟಾದಲ್ಲಿ ವಾಲ್ಮೀಕಿ ಸಮುದಾಯದ ಒಬ್ಬರಿಗೆ ಸಂಪುಟದಲ್ಲಿ ಅವಕಾಶ ದೊರಕಿದೆ. ಬ್ರಾಹ್ಮಣ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಹಿಂದುಳಿದ ವರ್ಗಗಳ ಏಳು ಮಂದಿಗೆ ಸಂಪುಟದಲ್ಲಿ ಅವಕಾಶ ದೊರಕಿದೆ. ಕುರುಬ ಸಮುದಾಯದ ಮೂವರು, ಈಡಿಗ (ಬಿಲ್ಲವ) ಸಮುದಾಯದ ಇಬ್ಬರು, ರಜಪೂತ ಮತ್ತು ಕಮ್ಮ (ನಾಯ್ಡು) ಸಮುದಾಯದ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. ಬೊಮ್ಮಾಯಿ ಅವರ ಸಂಪುಟದಲ್ಲಿ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ ಯಾರೂ ಇಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT