ಬುಧವಾರ, ಅಕ್ಟೋಬರ್ 5, 2022
27 °C

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ: ಅರುಣ್ ಸಿಂಗ್

ಐಎಎನ್‍ಎಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಬಿಜೆಪಿಯ ಕರ್ನಾಟಕ ಉಸ್ತುವಾರಿ ಹಾಗೂ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶುಕ್ರವಾರ ತಿಳಿಸಿದ್ದಾರೆ 

ಮುಖ್ಯಮಂತ್ರಿ ಬದಲಾವಣೆಯಂತಹ ಊಹಾಪೋಹವನ್ನು ಹರಿಬಿಡುವ ಮೂಲಕ ಕಾಂಗ್ರೆಸ್‌ ಗೊಂದಲವನ್ನು ಸೃಷ್ಟಿಸಿದೆ ಎಂದು ಸಿಂಗ್‌ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿರುವ ಅವರು, ‘ಕರ್ನಾಟಕದಲ್ಲಿ ಮುಂದಿನ ವರ್ಷ ನಾವು ಸರ್ಕಾರ ರಚಿಸುತ್ತೇವೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ. ಇಡೀ ಸಮಸ್ಯೆಯನ್ನು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ  ಸೃಷ್ಟಿಸಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ. 

‘ಕಾಂಗ್ರೆಸ್ ನಾಯಕರು ಸಿಎಂ ಬದಲಾವಣೆ ಆಗುವ ವಿಚಾರವನ್ನು ಹುಟ್ಟು ಹಾಕಲು ಯತ್ನಿಸುತ್ತಿದ್ದಾರೆ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. 

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸ್ಪರ್ಧಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಬೊಮ್ಮಾಯಿ ಅವರು ರೈತರಿಗೆ, ಯುವಕರಿಗೆ, ಎಸ್‌ಸಿ ಮತ್ತು ಎಸ್‌ಟಿ ಜನರಿಗಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ನಾವು ಪೂರ್ಣ ಬಹುಮತದೊಂದಿಗೆ ಹಿಂತಿರುಗುತ್ತೇವೆ. 150 ಸ್ಥಾನಗಳ ಗೆಲ್ಲಲಿದ್ದೇವೆ ಎಂದು ಸಿಂಗ್‌ ಪ್ರತಿಪಾದಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು