ಶನಿವಾರ, ಮಾರ್ಚ್ 25, 2023
29 °C

ಮೇಕೆದಾಟು ಮಾಡಿಯೇ ತೀರುತ್ತೇವೆ: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ. ಅದನ್ನು ಮಾಡಿಯೇ ತೀರುತ್ತೇವೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಮೇಕೆದಾಡು ಯೋಜನೆ ಬಗ್ಗೆ ಮಾತನಾಡಿರುವ ಭಾಷೆ ಮತ್ತು ವೈಖರಿ ಸರಿಯಾಗಿಲ್ಲ ಎಂದು ಹೇಳಿದರು.

ಕೃಷ್ಣರಾಜಸಾಗರ ಅಣೆಕಟ್ಟು ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳಿಗೂ ತಮಿಳುನಾಡು ಅಡ್ಡಿ ಮಾಡುತ್ತಲೇ ಬಂದಿತ್ತು. ಎಲ್ಲದಲ್ಲೂ ಆಕ್ಷೇಪ ವ್ಯಕ್ತಪಡಿಸಿತ್ತು. ನಾವು ಈಗ ಮಾಡಲು ಹೊರಟಿರುವುದು ಕುಡಿಯುವ ನೀರು ಮತ್ತು ಜಲವಿದ್ಯುತ್‌ ಉತ್ಪಾದನೆ ಯೋಜನೆಯಾಗಿದೆ. ಜಲ ಸಂಕಷ್ಟದ ಸಂದರ್ಭದಲ್ಲಿ ನೀರು ನಿರ್ವಹಣೆಗೂ ಈ ಯೋಜನೆ ಸಹಾಯಕವಾಗಲಿದೆ ಎಂದರು.

ಈ ಯೋಜನೆಗೆ ಸಂಬಂಧಿಸಿದ ಪ್ರಕರಣವೊಂದು ಸುಪ್ರೀಂಕೋರ್ಟ್‌ನಲ್ಲಿದೆ. ಕಾನೂನು ಹೋರಾಟದಲ್ಲಿ ರಾಜ್ಯಕ್ಕೇ ಜಯವಾಗುತ್ತದೆ ಎಂಬ ವಿಶ್ವಾಸವಿದೆ. ಇದಕ್ಕೆ ಕೇಂದ್ರದ ವಿವಿಧ ಇಲಾಖೆಗಳಿಂದ ಸಿಗಬೇಕಾದ ಎಲ್ಲ ಅನುಮತಿಗಳೂ ಸಿಗಲಿದೆ ಎಂದು ಬೊಮ್ಮಾಯಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು